Home » Nityananda: ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ನಿಧನ!? ಕುಟುಂಬದವರಿಂದಲೇ ಮಾಹಿತಿ ಬಹಿರಂಗ

Nityananda: ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ನಿಧನ!? ಕುಟುಂಬದವರಿಂದಲೇ ಮಾಹಿತಿ ಬಹಿರಂಗ

0 comments

Nityananda: ಭಾರತದಲ್ಲಿ ಸಾಕಷ್ಟು ವಿವಾದಗಳ ಸುಳಿಯಲ್ಲಿ ಸಿಲುಕಿ, ವಿದೇಶಕ್ಕೆ ಕಾಲ್ ಕೆತ್ತಿರುವ ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಅವರು ಸಾವನ್ನಪ್ಪಿದ್ದಾರೆ ಎಂಬ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಹಬ್ಬುತ್ತಿದೆ.

ಹೌದು, ನಿತ್ಯಾನಂದನ ಸಹೋದರಿಯ ಮಗ ಸುಂದರೇಶ್ವರನ್ ಈ ಮಾಹಿತಿಯನ್ನು ವಿಡಿಯೋ ಮೂಲಕ ಬಹಿರಂಗಪಡಿಸಿದ್ದಾರೆ. ವಿಡಿಯೋ ದಲ್ಲಿ ಅವರು ಅವರು ತಮ್ಮ ಜೀವನದುದ್ದಕ್ಕೂ ಹಿಂದೂ ಧರ್ಮಕ್ಕಾಗಿ ಶ್ರಮಿಸಿದರು ಎಂದು ಸ್ಮರಿಸಿದರು. ನಿತ್ಯಾನಂದರು ತಮ್ಮ ಆಧ್ಯಾತ್ಮಿಕ ಸಂದೇಶಗಳಿಂದ ಅನೇಕ ಭಕ್ತರ ಮೆಚ್ಚುಗೆಯನ್ನು ಗಳಿಸಿದರು, ಇಂದು ನಮ್ಮನ್ನು ಅಗಲಿದ್ದಾರೆ ಎನ್ನಲಾಗಿದೆ. ಅವರ ಆಶ್ರಮವು ಸಾವಿನ ವರದಿಗಳ ಬಗ್ಗೆ ಯಾವುದೇ ಹೇಳಿಕೆಯನ್ನು ನೀಡಿಲ್ಲ. ಆದರೆ ಇದರ ಸತ್ಯಾಸತ್ಯತೆ ಬಗ್ಗೆ ಇನ್ನೂ ಮಾಹಿತಿ ಹೊರಬರಬೇಕಿದೆ.

ಅಂದಹಾಗೆ ಕೆಲವು ದಿನಗಳ ಹಿಂದೆ, ಅವರು ದೀರ್ಘಕಾಲದವರೆಗೆ ಅನಾರೋಗ್ಯದಿಂದ ಬಳಲುತ್ತಿದ್ದರು ಮತ್ತು ಕೋಮಾದಲ್ಲಿದ್ದಾರೆ ಎಂಬ ವರದಿಗಳು ಬಂದಿದ್ದವು. ಆದರೆ ಅವರು ಈ ವದಂತಿಗಳಿಗೆ ಅಂತ್ಯ ಹಾಡಲು ವೀಡಿಯೊ ಮೂಲಕ ಉಪನ್ಯಾಸಗಳನ್ನು ನೀಡಲು ಪ್ರಾರಂಭಿಸಿದರು. ಆದರೆ, ಈಗ ಅವರು ಮತ್ತೆ ಸಾವನ್ನಪ್ಪಿದ್ದಾರೆ ಎಂಬ ವರದಿಗಳು ಹರಿದಾಡುತ್ತಿವೆ. ಆದರೆ ವಿವಿಧ ಮೊಕದ್ದಮೆಗಳಿಂದ ತಪ್ಪಿಸಿಕೊಳ್ಳಲು ನಿತ್ಯಾನಂದ ಈ ರೀತಿ ಸುಳ್ಳು ಮಾಹಿತಿಯನ್ನು ಹರಡಿರಬಹುದು ಎಂದು ಹೇಳಲಾಗುತ್ತದೆ.

You may also like