Home » Price hike: ಬೆಲೆ ಏರಿಕೆಗೆ ಬಿಜೆಪಿ ಮತ್ತು ಮೋದಿ ಸರ್ಕಾರವೇ ಕಾರಣ: ಸಚಿವ ಪ್ರಿಯಾಂಕ್ ಖರ್ಗೆ

Price hike: ಬೆಲೆ ಏರಿಕೆಗೆ ಬಿಜೆಪಿ ಮತ್ತು ಮೋದಿ ಸರ್ಕಾರವೇ ಕಾರಣ: ಸಚಿವ ಪ್ರಿಯಾಂಕ್ ಖರ್ಗೆ

0 comments

Price hike: ದೇಶದಲ್ಲಿ ಉಂಟಾಗಿರುವ ಬೆಲೆ ಏರಿಕೆಗೆ ಬಿಜೆಪಿ(BJP) ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ(PM Narendra Modi) ಅವರ ಆರ್ಥಿಕ ನೀತಿಗಳೇ ಕಾರಣ ಎಂದು ಸಚಿವ ಪ್ರಿಯಾಂಕ್ ಖರ್ಗೆ(MLA Priyank Kharge) ಹೇಳಿದರು. ಬೆಂಗಳೂರಿನಲ್ಲಿ(Bengaluru) ಮಾತನಾಡಿದ ಅವರು, “ಬೆಲೆ ಏರಿಕೆಗೆ ಬಿಜೆಪಿಯೇ ಕಾರಣ, ಕೊನೆಗೂ ಅವರಿಗೆ ಜ್ಞಾನೋದಯವಾಗಿದೆ. ಪ್ರತಿಭಟನೆಗಳನ್ನು ಕೇಂದ್ರ ಸರ್ಕಾರದ ವಿರುದ್ಧ ಮಾಡಿದರೆ ಒಳ್ಳೆಯದು” ಎಂದರು. ಯತ್ನಾಳ್ ಮತ್ತು ವಿಜಯೇಂದ್ರ ನಡುವಿನ ಸಮರವನ್ನು ಮುಚ್ಚಿಹಾಕಲು ಪ್ರತಿಭಟನೆಗಳನ್ನು ಆಯೋಜಿಸಲಾಗುತ್ತಿದೆ ಎಂದು ಅವರು ಹೇಳಿದರು.

ರಾಜ್ಯ ಸರ್ಕಾರ ಇತ್ತೀಚೆಗೆ ಜನರಿಗೆ ಬೆಲೆ ಏರಿಕೆ ಬಿಸಿ ನೀಡುತ್ತಲೇ ಇದೆ. ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಬೆಲೆ ಏರಿಕೆ ಆಗುತ್ತಲೇ ಇದೆ. ಇದರ ಪರಿಣಾಮ ಅತ್ಯಂತ ದುಬಾರಿ ಜೀವನ ನಡೆಸುವ ದುಸ್ಥಿತಿ ನಿರ್ಮಾಣವಾಗಿದೆ. ಉಸಿರಾಡುವ ಗಾಳಿಯನ್ನ ಬಿಟ್ಟರೆ ಉಳಿದೆಲ್ಲವೂ ದುಬಾರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ನಿನ್ನೆ ಸರ್ಕಾರದ ವಿರುದ್ಧ ಹರಿಹಾಯ್ದಿದ್ದರು. ಇದೀಗ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿಯವರು ಇದೇ ವಿಚಾರವಾಗಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಇದಕ್ಕೆ ಪ್ರತಿಕ್ರಿಸಿ ಪ್ರಿಯಾಂಕ್ ಖರ್ಗೆಯವರು ಬಿಜೆಪಿಗೆ ತಿರುಗೇಟು ಕೊಟ್ಟಿದ್ದಾರೆ.

You may also like