9
Murder: ಅಜೆಕಾರು ಬಾಲಕೃಷ್ಣ ಪೂಜಾರಿ ಕೊಲೆ (Murder) ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಆರೋಪಿ ದಿಲೀಪ್ ಹೆಗ್ಡೆಗೆ ಏಪ್ರಿಲ್ 1ರಂದು ಹೈಕೋರ್ಟ್ ಜಾಮೀನು ಮಂಜೂರು ಗೊಳಿಸಿದೆ.
ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಪ್ರತಿಮಾ ಮತ್ತು ದಿಲೀಪ್ ಹೆಗ್ಡೆ ಇವರನ್ನು ಉಸಿರುಗಟ್ಟಿಸಿ ಕೊಲೆ (Murder) ಮಾಡಿದ ಆರೋಪದಡಿ ಬಂಧಿಸಲಾಗಿತ್ತು. ಆರೋಪಿ ಪರ ವಕೀಲರು ಹೈಕೋರ್ಟ್ ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದು ಇದೀಗ ಆರೋಪಿ ದಿಲೀಪ್ ಹೆಗ್ಡೆ ಇವರಿಗೆ ಜಾಮೀನು ಮಂಜೂರು ಗೊಳಿಸಲಾಗಿದೆ.
