Home » Tamilunadu : ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ !!

Tamilunadu : ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ !!

0 comments

Tamilunadu : ತಮಿಳುನಾಡು ಬಿಜೆಪಿಯಲ್ಲಿ ಅಚ್ಚರಿ ಬೆಳವಣಿಗೆ ನಡೆದಿದ್ದು, ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವುದಾಗಿ ಅಣ್ಣಾಮಲೈ ಘೋಷಿಸಿದ್ದಾರೆ.

ರಾಜ್ಯದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಮತ್ತು ಎಐಎಡಿಎಂಕೆ ನಡುವಿನ ಮೈತ್ರಿ ಮಾತುಕತೆಗಳು ಅವರ ನಿರ್ಗಮನಕ್ಕೆ ಕಾರಣವಾಗಿದೆ ಎನ್ನಲಾಗಿದೆ.

2023ರಲ್ಲಿ ರಾಜಕೀಯ ಅಭಿಪ್ರಾಯಗಳು ಭಿನ್ನವಾದ ಕಾರಣ ತಮಿಳುನಾಡಿನಲ್ಲಿ ಬಿಜೆಪಿ-ಎಐಎಡಿಎಂಕೆ ಮೈತ್ರಿ ಮುರಿದುಬಿದ್ದಿತ್ತು. ವರದಿಯಂತೆ ಇದಕ್ಕೆ ಮುಖ್ಯ ಕಾರಣ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ. ಈಗ ಪುನಃ ಮೈತ್ರಿ ಮಾಡಿಕೊಳ್ಳಬೇಕಾದರೆ ಎಡಪ್ಪಾಡಿ ಕೆ. ಪಳನಿಸ್ವಾಮಿ ಅಣ್ಣಾಮಲೈ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಸಬೇಕು ಎಂದು ಬೇಡಿಕೆ ಇಟ್ಟಿದ್ದಾರೆ ಎಂದು ಪಕ್ಷದ ಮೂಲಗಳು ಹೇಳಿದ್ದವು. ಇದೀಗ ಅಣ್ಣಾಮಲೈ ರಾಜೀನಾಮೆ ನೀಡುವುದಾಗಿ ಘೋಷಿಸುವ ಮೂಲಕ ಅದೆಲ್ಲವೂ ನಿಜವಾಗಿದೆ.

You may also like