4
2nd PU Result : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ(2nd PUC Result)ವನ್ನು ಪ್ರಕಟಿಸಿದೆ. ಸಂತೋಷದ ಸುದ್ದಿ ಎಂದರೆ ಕಲಾಭಿಭಾಗದಲ್ಲಿ ಲಾರಿ ಡ್ರೈವರ್ ಮಗಳು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾಳೆ.
ಹೌದು, ಸಂಜನಾ ಎಂಬ ವಿದ್ಯಾರ್ಥಿನಿ ಕಲಾ ವಿಭಾಗದಲ್ಲಿ 600ಕ್ಕೆ 597 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಸಂಜನಾ ಬಾಯಿ ಮರಿಯಮ್ಮನಹಳ್ಳಿಯ ನಿವಾಸಿಯಾಗಿದ್ದು, ತಂದೆ ಲಾರಿ ಡ್ರೈವರ್ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಹೀಗೆ ಲಾರಿ ಡ್ರೈವರ್ ಮಗಳು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ. ಕೊಟ್ಟೂರಿನ ಇಂದೂ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದಾರೆ.
