Home » Rain: ಸೈಕ್ಲೋನ್ ಎಫೆಕ್ಟ್ – ರಾಜ್ಯದ ಈ ಜಿಲ್ಲೆಗಳಲ್ಲಿ ಎ. 17ರ ತನಕ ಭರ್ಜರಿ ಮಳೆ

Rain: ಸೈಕ್ಲೋನ್ ಎಫೆಕ್ಟ್ – ರಾಜ್ಯದ ಈ ಜಿಲ್ಲೆಗಳಲ್ಲಿ ಎ. 17ರ ತನಕ ಭರ್ಜರಿ ಮಳೆ

0 comments

Rain: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಸೃಷ್ಟಿಯಾಗಿರುವ ಹಿನ್ನೆಲೆ ರಾಜ್ಯದಲ್ಲಿ ಭಾರೀ ಮಳೆಯಾಗಲಿದ್ದು, ಏಪ್ರಿಲ್‌ 17ರ ವರೆಗೆ ಬೆಂಗಳೂರು ಸೇರಿದಂತೆ ಒಟ್ಟು 25 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹೌದು, ಕೆಲ ದಿನಗಳಿಂದ ಬಂಗಾಳಕೊಲ್ಲಿಯಲ್ಲಿ ಸೈಕ್ಲೋನ್ ಸೃಷ್ಟಿಯಾಗಿರುವ ಹಿನ್ನೆಲೆ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ. ರಾಜ್ಯದ 25 ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಇಂದು ಹವಮಾನ ಇಲಾಖೆ ತಿಳಿಸಿದೆ.

ಅಲ್ಲದೆ ಮುಂದಿನ ಐದು ದಿನಗಳಲ್ಲಿ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆ ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

You may also like