5
KCET Exam: ರಾಜ್ಯದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಇಂದಿನಿಂದ KCET ಪರೀಕ್ಷೆ ಆರಂಭಗೊಳ್ಳಲಿದ್ದು, ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪರೀಕ್ಷಾ ಕೇಂದ್ರ ಸುತ್ತಮುತ್ತ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿದೆ.
ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ಹಾಲ್ ಟಿಕೆಟ್ ಹಾಗೂ ಒಂದು ಫೋಟೋ ಐಡಿ ಪುರಾವೆಯೊಂದಿಗೆ ಪರೀಕ್ಷಾ ಕೇಂದ್ರಕ್ಕೆ ತರಬೇಕು ಎಂದು ಕೋರಲಾಗಿದೆ. ಕೆಸಿಇಟಿ ಹಾಲ್ ಟಿಕೆಟ್ ನಲ್ಲಿ ಉಲ್ಲೇಖಿಸಲಾದ ಎಲ್ಲಾ ಮಾಹಿತಿಯನ್ನು ಪರಿಶೀಲಿಸಲು ಸೂಚಿಸಲಾಗಿದೆ.
ಏಪ್ರಿಲ್ 15, 16 ಹಾಗೂ 17 ರಂದು ರಾಜ್ಯದಾದ್ಯಂತ ಪರೀಕ್ಷೆ ನಡೆಯಲಿದ್ದು, ಈ ಪರೀಕ್ಷೆ ಬೆಳಗ್ಗೆ ಮತ್ತು ಮಧ್ಯಾಹ್ನ ನಡೆಯಲಿದೆ. ಬೆಳಗ್ಗೆ 10.30 ರಿಂದ 11.50 ರವರೆಗೆ ಹಾಗೂ ಮಧ್ಯಾಹ್ನ 2.30 ರಿಂದ 3.50 ರವರೆಗೆ ಪರೀಕ್ಷೆ ನಡೆಯಲಿದೆ
