Home » Raichur: ರಾಯಚೂರು ಉಷ್ಣವಿದ್ಯುತ್ ಸ್ಥಾವರದಲ್ಲಿ ಅಗ್ನಿ ದುರಂತ!

Raichur: ರಾಯಚೂರು ಉಷ್ಣವಿದ್ಯುತ್ ಸ್ಥಾವರದಲ್ಲಿ ಅಗ್ನಿ ದುರಂತ!

0 comments

Raichur: ಭಾನುವಾರ ಶಕ್ತಿನಗರದಲ್ಲಿರುವ ರಾಯಚೂರು
ಶಾಖೋತ್ಪನ್ನ ವಿದ್ಯುತ್ ಸ್ಥಾವರದ (ಆರ್‌ಟಿಪಿಎಸ್) ನಾಲ್ಕನೇ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ಅಪಾರ ಹಾನಿ ಸಂಭವಿಸಿದೆ.

ಬೆಂಕಿ ಎಲ್ಲೆಡೆ ಹರಡುತ್ತಾ ಹೋಗಿದೆ. ಘಟಕದಲ್ಲಿದ್ದ ಕಾರ್ಮಿಕರು ಬೆಂಕಿ ನಂದಿಸಲು ಎಲ್ಲ ರೀತಿ ಪ್ರಯತ್ನ ಮಾಡಿದರೂ ಬೆಂಕಿ ನಿಯಂತ್ರಣಕ್ಕೆ ಬರಲಿಲ್ಲ. ಪರಿವರ್ತಕ ಸುಟ್ಟು ಕರಕಲಾಗಿದ್ದು, ಉಳಿದ ಉಪಕರಣಗಳಿಗೂ ಹಾನಿಯಾಗಿದೆ ಎಂದು ವರದಿಯಾಗಿದೆ‌. ಯಾವುದೇ ಸಾವುನೋವುಗಳು ವರದಿಯಾಗಿಲ್ಲ.

ಬೆಂಕಿ ಅವಘಡದಿಂದ ಎಷ್ಟು ನಷ್ಟವಾಗಿದೆ ಎನ್ನುವುದು ಇದುವರೆಗೂ ಸ್ಪಷ್ಟವಾಗಿಲ್ಲ. ಈ ಬಗ್ಗೆ ಅಧಿಕಾರಿಗಳು ಇನ್ನೂ ಪರಿಶೀಲನೆ ಮಾಡುತ್ತಿದ್ದಾರೆ. ಸದ್ಯಕ್ಕೆ 210 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದಿಸುವ ಘಟಕವನ್ನು ಸ್ಥಗಿತಗೊಳಿಸಲಾಗಿದೆ ಎಂದು ಪ್ರಜಾವಾಣಿ ವರದಿ ಮಾಡಿದೆ.

You may also like