Home » Vaishnavi gowda: ಸೈಲೆಂಟ್ ಆಗಿ ಎಂಗೇಜ್‌ಮೆಂಟ್ ಮಾಡಿಕೊಂಡ ವೈಷ್ಣವಿ ಗೌಡ! ಹುಡುಗ ಯಾರು?

Vaishnavi gowda: ಸೈಲೆಂಟ್ ಆಗಿ ಎಂಗೇಜ್‌ಮೆಂಟ್ ಮಾಡಿಕೊಂಡ ವೈಷ್ಣವಿ ಗೌಡ! ಹುಡುಗ ಯಾರು?

0 comments

Vaishnavi gowda: ಕಿರುತೆರೆ ನಟಿ ವೈಷ್ಣವಿ ಗೌಡ (Vaishnavi gowda) ಸದ್ದಿಲ್ಲದೇ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಶೀಘ್ರವೇ ಅವರು ದಾಂಪತ್ಯ ಜೀವನಕ್ಕೂ ಕಾಲಿಡಲು ಸಜ್ಜಾಗುತ್ತಿದ್ದಾರೆ ಎನ್ನಲಾಗಿದೆ.

ಅಗ್ನಿಸಾಕ್ಷಿ ಹಾಗೂ ಸೀತಾರಾಮ ಧಾರವಾಹಿ ಮೂಲಕ ಮನೆಮಾತಾಗಿದ್ದ ವೈಷ್ಣವಿ ಗೌಡ ಅನುಕೂಲ್ ಮಿಶ್ರಾ ಎನ್ನುವವರ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಎಂಗೇಜ್‌ಮೆಂಟ್‌ ಫೋಟೋಗಳನ್ನು ನಟಿ ಖುದ್ದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಮಾತ್ರವಲ್ಲದೇ ತಾವು ನಿಶ್ಚಿತಾರ್ಥ ಮಾಡಿಕೊಂಡ ಹುಡುಗನ ಬಗ್ಗೆಯೂ ಯೂಟ್ಯೂಬ್ ಚಾನೆಲ್‌ನಲ್ಲಿ ಹೇಳಿಕೊಂಡಿದ್ದಾರೆ.

ಅನುಕೂಲ್ ಬೇರೆ ರಾಜ್ಯದವರು, ಅವರು ಇಂಡಿಯನ್ ಏರ್‌ಫೋರ್ಸ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ವೈಷ್ಣವಿ ತಮ್ಮ ಅಭಿಮಾನಿಗಳಿಗೆ ಭಾವಿ ಪತಿಯ ಬಗ್ಗೆ ಪರಿಚಯ ಮಾಡಿಸಿ ಕೊಟ್ಟಿದ್ದಾರೆ. ಆದರೆ ಮದುವೆ ಯಾವಾಗ ಎನ್ನುವ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ಅವರು ಹಂಚಿಕೊಂಡಿಲ್ಲ.

You may also like