Home » Rikki Rai: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ !!

Rikki Rai: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ !!

0 comments

Rikki Rai: ಮಾಜಿ ಡಾನ್ ಮುತ್ತಪ್ಪ ರೈ  ಪುತ್ರನ ಮೇಲೆ ರಾಮನಗರ ತಾಲೂಕಿನ ಬಿಡದಿ ಗೇಟ್ ಬಳಿ ಗುಂಡಿನ ದಾಳಿಯಾಗಿದೆ.

 

ಹೌದು, ರಾಮನಗರ ಜಿಲ್ಲೆಯ ಬಿಡದಿಯಲ್ಲಿ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಕಾರಿನ ಹಿಂಬದಿ ಸೀಟಿನಲ್ಲಿ ಕುಳಿತಿದ್ ದಮುತ್ತಪ್ಪ ರೈ. ಒಂದು ಸುತ್ತು ಫೈರಿಂಗ್ ನಡೆಸಿ ದುಷ್ಕರ್ಮಿ ಪರಾರಿಯಾಗಿದ್ದಾರೆ. ರಿಕ್ಕಿ ರೈ ಅವರನ್ನು ಗುರಿಯಾಗಿಸಿಕೊಂಡು ಮೂರು ಸುತ್ತು ಗುಂಡುಗಳನ್ನು ಹಾರಿಸಲಾಗಿದ್ದು, ಅವರಿಗೆ ಗಾಯಗಳಾಗಿವೆ. ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

 

ಡ್ರೈವರ್ ಹಾಗೂ ಗನ್ ಮ್ಯಾನ್ ಜೊತೆಗೆ ಬಿಡದಿ ಮನೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಗುಂಡಿನ ದಾಳಿಯಾಗಿದೆ. ದಾಳಿ ವೇಳೆ ರಿಕ್ಕಿ ರೈ ಮೂಗು, ಕೈ ಭಾಗಕ್ಕೆ ಗಂಭೀರವಾದ ಗಾಯವಾಗಿದೆ. ಮಧ್ಯರಾತ್ರಿ 12.30 ರ ಸುಮಾರಿಗೆ ಘಟನೆ ನಡೆದಿದೆ

 

ಘಟನೆಯ ಸ್ಥಳಕ್ಕೆ ರಾಮನಗರ ಎಸ್‌ಪಿ ಶ್ರೀನಿವಾಸ್ ಗೌಡ ಮತ್ತು ಡಿವೈಎಸ್‌ಪಿ ಶ್ರೀನಿವಾಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ದಾಳಿಯ ಹಿಂದಿನ ಕಾರಣ, ದುಷ್ಕರ್ಮಿಗಳ ಗುರುತು ಮತ್ತು ಈ ಘಟನೆಯ ಹಿನ್ನೆಲೆಯನ್ನು ಪತ್ತೆಹಚ್ಚಲು ತೀವ್ರ ಪ್ರಯತ್ನ ನಡೆಯುತ್ತಿದೆ

You may also like