2
H D Kumaraswamy: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಹೆಚ್ಚಿನ ಚಿಕಿತ್ಸೆಗೆಂದು ವಿದೇಶಕ್ಕೆ ತೆರಳಿದ್ದಾರೆ ಎಂದು ವರದಿಯಾಗಿದೆ.
ಶ್ವಾಸಕೋಶ ಸೋಂಕಿಗೆ ತುತ್ತಾಗಿದ್ದ ಅವರಿಗೆ ಕೆಮ್ಮು ಕಡಿಮೆಯಾಗಿಲ್ಲ. ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆ ಮುನ್ನ ಅವರ ಮೂಗಿನಿಂದ ರಕ್ತಸ್ರಾವ ಕೂಡಾ ಆಗಿತ್ತು. ಅವರ ಶ್ವಾಸಕೋಶದ ಸೋಂಕು ಮತ್ತಷ್ಟು ಹೆಚ್ಚಿದ್ದು, ವೈದ್ಯರ ಸಲಹೆಯ ಮೇರೆಗೆ ಹೆಚ್ಚಿನ ಚಿಕಿತ್ಸೆಗೆಂದು ವಿದೇಶಕ್ಕೆ ತೆರಳಲು ಸಜ್ಜಾಗಿದ್ದಾರೆ ಎಂದು ವರದಿಯಾಗಿದೆ.
ಜಿಂದಾಲ್‌ನಲ್ಲಿ ಕುಮಾರಸ್ವಾಮಿ ಇತ್ತೀಚೆಗೆ ಚಿಕಿತ್ಸೆ ಪಡೆದಿದ್ದರು. ನಂತರ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆಗೊಳಗಾಗಿದ್ದರು. ಚೇತರಿಕೆ ಕಾಣದ ಕಾರಣ ಒಂದು ವಾರದವರೆಗೆ ಚಿಕಿತ್ಸೆ ಪಡೆಯಲು ಸಿಂಗಾಪುರಕ್ಕೆ ಹೊರಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
