Home » Bengaluru: ಪ್ರಜ್ವಲ್ ರೇವಣ್ಣಗೆ ಕೋರ್ಟ್ ಜಾಮೀನು ನಿರಾಕರಣೆ!

Bengaluru: ಪ್ರಜ್ವಲ್ ರೇವಣ್ಣಗೆ ಕೋರ್ಟ್ ಜಾಮೀನು ನಿರಾಕರಣೆ!

0 comments
Prajwal Revanna

Bengaluru: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜಾಮೀನು ನೀಡಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರಾಕರಿಸಿದೆ.

ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದಲ್ಲಿ ಜಾಮೀನಿಗಾಗಿ ಎರಡನೇ ಬಾರಿಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಅರ್ಜಿ ಊರ್ಜಿತ ಅಲ್ಲ ಎಂದು ಅರ್ಜಿಯನ್ನು ವಜಾಗೊಳಿಸಿ ಕೋರ್ಟ್ ಆದೇಶಿಸಿದೆ.

40 ವರ್ಷದ ಸಂತ್ರಸ್ತೆಗೆ ಬೆದರಿಕೆಯೊಡ್ಡಿ ಪ್ರಜ್ವಲ್ ರೇವಣ್ಣ ಅತ್ಯಾಚಾರ ಎಸಗಿದ್ದರು ಎಂಬುದು ತನಿಖೆಯಿಂದ ದೃಢಪಟ್ಟಿದೆ ಎಂದು ಸಿಐಡಿ ತಿಳಿಸಿತ್ತು. ಜೊತೆಗೆ ಪ್ರಕರಣದ ತನಿಖೆ ನಡೆಸಿ 1,691 ಪುಟಗಳ ಚಾರ್ಜ್‌ಶೀಟ್ ಅನ್ನು ಎಸ್‌ಐಟಿ ಜನಪ್ರತಿನಿಧಿಗಳ ಸಲ್ಲಿಸಲಾಗಿತ್ತು.

You may also like