Home » Ricky Rai: ರಿಕ್ಕಿ ರೈ ಕೊಲೆ ಯತ್ನ ಪ್ರಕರಣ; FIR ರದ್ದು ಕೋರಿ ಹೈಕೋರ್ಟ್‌ಗೆ ಅರ್ಜಿ!

Ricky Rai: ರಿಕ್ಕಿ ರೈ ಕೊಲೆ ಯತ್ನ ಪ್ರಕರಣ; FIR ರದ್ದು ಕೋರಿ ಹೈಕೋರ್ಟ್‌ಗೆ ಅರ್ಜಿ!

0 comments

Ricky Rai: ಬಿಡದಿ ಸಮೀಪ ಮಾಜಿ ಭೂಗತ ದೊರೆ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ನಡೆದ ಕೊಲೆ ಯತ್ನ ಪ್ರಕರಣದಲ್ಲಿ ತಮ್ಮ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಮಲತಾಯಿ ಅನುರಾಧಾ ರೈ ಹೈಕೋರ್ಟ್‌ ಮೆಟ್ಟಿಲೇರಿದ್ದು, ಅರ್ಜಿಯ ವಿಚಾರಣೆ ಎ.22 ರಂದು ನಡೆಯಲಿರುವ ಕುರಿತು ವರದಿಯಾಗಿದೆ.

ಹೇಮಂತ್‌ ಚಂದನ್‌ ಗೌಡರ್‌ ಅವರಿದ್ದ ನ್ಯಾಯಪೀಠದ ಮುಂದೆ ಅನುರಾಧಾ ರೈ ಪರ ವಕೀಲರು ಸೋಮವಾರ ಹಾಜರಾಗಿ, ಅರ್ಜಿ ಪರಿಗಣಿಸಿ ತನಿಖೆಗೆ ಮಧ್ಯಂತರ ತಡೆ ನೀಡಬೇಕೆಂದು ಮನವಿ ಮಾಡಿದರು. ಆದರೆ ಅರ್ಜಿ ವಿಚಾರಣೆಯನ್ನು ಮಂಗಳವಾರ ನಡೆಸುವುದಾಗಿ ನ್ಯಾಯಪೀಠ ಹೇಳಿದೆ.

ಎರಡನೇ ಆರೋಪಿ ಮುತ್ತಪ್ಪ ರೈ ಎರಡನೇ ಪತ್ನಿ ಅನುರಾಧಾ ರಾಮನಗರ ಜಿಲ್ಲಾ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.

You may also like