2
Bangalore: ಬೈಕ್ ಸವಾರನ ಮೇಲೆ ವಿಂಗ್ ಕಮಾಂಡರ್ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
ಬೈಕ್ ಸವಾರನ ಮೇಲೆ ವಿಂಗ್ ಕಮಾಂಡರ್ ಹಲ್ಲೆಗೆ ಸಂಬಂಧಪಟ್ಟಂತೆ ಎಫ್‌ಐಆರ್ ದಾಖಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ಆತ ನಾಪತ್ತೆಯಾಗಿದ್ದಾನೆ ಎಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಪಶ್ಚಿಮ ಬಂಗಾಳ ಮೂಲದ ವಿಂಗ್ ಕಮಾಂಡರ್ ಶಿಲಾದಿತ್ಯ ನಾಪತ್ತೆಯಾಗಿದ್ದು, ಪೊಲೀಸರು ತನಿಖೆ ಮಾಡುತ್ತಿದ್ದಾರೆ.
