12
Mandya: ತಾಲೂಕಿನ ಗ್ರಾಮದಲ್ಲಿ ಶನಿವಾರ ರಾತ್ರಿ ಕಬಡ್ಡಿ ಪಂದ್ಯ ನಡೆಯುವ ವೇಳೆ ವೀಕ್ಷಕರ ಗ್ಯಾಲರಿ ಕುಸಿದು ಪಾಪಣ್ಣಾಚಾರಿ (50) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಕ್ಕಳು ಸೇರಿ ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಡಿಮೆ ಸಾಮರ್ಥ್ಯದ ಕಬ್ಬಿಣ ಬಳಕೆ, ಸರಿಯಾದ ಇಂಟರ್ ಲಾಕ್ ಬಳಸದಿರುವುದೇ ವೀಕ್ಷಕರ ಗ್ಯಾಲರಿ ಕುಸಿಯುವುದಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. ಜತೆಗೆ ಸಾಮರ್ಥ್ಯಕ್ಕಿಂತ ಹೆಚ್ಚು ವೀಕ್ಷಕರು ಗ್ಯಾಲರಿಯಲ್ಲಿ ಕುಳಿತಿದ್ದರಿಂದ ಕುಸಿದು ಬಿದ್ದಿದೆ ಎಂದು ಹೇಳಲಾಗಿದೆ.
‘ಭೈರವ ಕಪ್’ ಹೆಸರಿನಲ್ಲಿ ಮೈಸೂರು ವಿಭಾಗ ಮಟ್ಟದ ಕಬಡ್ಡಿ ಪಂದ್ಯಾವಳಿಯನ್ನು ಶನಿವಾರ ಮತ್ತು ಭಾನುವಾರ ಏರ್ಪಡಿಸಲಾಗಿತ್ತು.
ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯ ಸ್ವಾಮಿ, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಮೃತ ಪಾಪಣ್ಣಾಚಾರಿ ಅವರ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಶಿವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
