Home » Belthangady: ಕಾಲೇಜು ವಿದ್ಯಾರ್ಥಿನಿಗೆ ಅಶ್ಲೀಲ ಮೆಸೇಜ್! ಅನ್ಯಕೋಮಿನ ಯುವಕ ಅರೆಸ್ಟ್

Belthangady: ಕಾಲೇಜು ವಿದ್ಯಾರ್ಥಿನಿಗೆ ಅಶ್ಲೀಲ ಮೆಸೇಜ್! ಅನ್ಯಕೋಮಿನ ಯುವಕ ಅರೆಸ್ಟ್

0 comments

Belthangady: ಬೆಳ್ತಂಗಡಿ ತಾಲೂಕಿನ ಖಾಸಗಿ ಕಾಲೇಜಿನ ವಿದ್ಯಾರ್ಥಿ ಕಂ, ವಾಲಿಬಾಲ್ ಆಟಗಾರ ಸೈಯದ್ ಎಂಬಾತನ ಕಾಮಕಾಂಡ ಬಯಲಾಗಿದ್ದು, ವಿದ್ಯಾರ್ಥಿನಿಗೆ ಮೆಸೇಜ್ ಮೂಲಕ ಲೈಂಗಿಕ ಕಿರುಕುಳ ಹಿನ್ನೆಲೆ ಹಿಂದೂ ಸಂಘಟನೆ ಕಾರ್ಯಕರ್ತರು ಹಲ್ಲೆ ಮಾಡಿದ್ದು, ಸೈಯದ್ ಮೊಬೈಲನ್ನು ಕಿತ್ತುಕೊಳ್ಳಲಾಗಿದೆ. ಅದರಲ್ಲಿ ನೂರಾರು ಹುಡುಗಿಯರ ಜೊತೆಗಿನ ಸರಸ ಸಲ್ಲಾಪದ ವಿಡಿಯೋಗಳು ಪತ್ತೆಯಾಗಿದ್ದು, ಬೆಳ್ತಂಗಡಿ ಪೊಲೀಸ ಪೋಕೋ ಕಾಯ್ದೆಯಡಿ ಸೈಯದ್‌ ನನ್ನು ಬಂಧನ ಮಾಡಿದ್ದಾರೆ.

ವಾಲಿಬಾಲ್ ಆಟಗಾರನಾಗಿರುವ ಸೈಯದ್ ಮೂಲತಃ ಕಾರ್ಕಳ ನಿವಾಸಿ. ಈತ ಬೆಳ್ತಂಗಡಿ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದು, ಓರ್ವ ವಿದ್ಯಾರ್ಥಿನಿಗೆ ಸೈಯದ್ ಮೆಸೇಜ್ ಮಾಡಿ ಲೈಂಗಿಕ ಕಿರುಕುಳ ನೀಡಿರುವ ಆರೋಪವಿದೆ. ಹಿಂದೂ ಸಂಘಟನೆ ಕಾರ್ಯಕರ್ತರು ಆತನನ್ನು ಥಳಿಸಿ ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ.

ಇತ್ತ ತನ್ನ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಸೈಯದ್‌ ಕೂಡಾ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾನೆ. ಹೀಗಾಗಿ ಹಿಂದೂ ಸಂಘಟನೆ ಕಾರ್ಯಕರ್ತರ ವಿರುದ್ಧವೂ ಎಫ್‌ಐಆರ್‌ ದಾಖಲಾಗಿದೆ. ಉಜಿರೆಯ ಮನೋಜ್‌ ಮತ್ತು ಪ್ರಜ್ವಲ್‌ ಗೌಡ ಎಂಬುವವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

You may also like