Home » PM Modi: ಉಗ್ರರ ವಿರುದ್ಧ ಪ್ರತೀಕಾರಕ್ಕೆ ಭಾರತೀಯ ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ – ಮೋದಿ

PM Modi: ಉಗ್ರರ ವಿರುದ್ಧ ಪ್ರತೀಕಾರಕ್ಕೆ ಭಾರತೀಯ ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ – ಮೋದಿ

0 comments
PM Modi

Pahalgam Terror Attack: ಪಹಲ್ಗಾಮ್‌ ಭಯೋತ್ಪಾದಕ ದಾಳಿಗೆ ಪ್ರತೀಕಾರ ಆಗಲೇಬೇಕು ಎಂದು ಭಾರತ ಪಣತೊಟ್ಟಿದ್ದು, ಭಾರತದ ಸಶಸ್ತ್ರ ಪಡೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಂಪೂರ್ಣ ಸ್ವಾತಂತ್ರ್ಯ ನೀಡಿ ಆದೇಶ ನೀಡಿದ್ದಾರೆ.

ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಮತ್ತು ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್‌ ಅನಿಲ್‌ ಚೌಹಾಣ್‌ ಅವರನ್ನು ಭೇಟಿ ಮಾಡಿದ ಪ್ರಧಾನ ಮಂತ್ರಿ ಈ ಸಂದೇಶ ರವಾನೆ ಮಾಡಿದ್ದಾರೆ.

ಭಯೋತ್ಪಾದನೆಗೆ ತಕ್ಕ ಹೊಡೆತ ನೀಡುವುದು, ನಮ್ಮ ರಾಷ್ಟ್ರೀಯ ಸಂಕಲ್ಪ ಎಂದು ಪ್ರಧಾನಿ ಈ ಸಂದರ್ಭದಲ್ಲಿ ಹೇಳಿದ್ದಾರೆ. ಮೋದಿ ಅವರು ನನಗೆ ಭಾರತೀಯ ಸೇನೆಯಲ್ಲಿ ಸಂಪೂರ್ಣ ನಂಬಿಕೆ ಮತ್ತು ವಿಶ್ವಾಸವಿದೆ ಎಂದು ಹೇಳಿದ್ದಾರೆ.

You may also like