Home » Sullia: ಸುಳ್ಯ: ಹೊಳೆಗೆ ಬಿದ್ದು ಮಹಿಳೆ ಮೃತ್ಯು!

Sullia: ಸುಳ್ಯ: ಹೊಳೆಗೆ ಬಿದ್ದು ಮಹಿಳೆ ಮೃತ್ಯು!

0 comments

Sullia: ಹೊಳೆಗೆ ಬಿದ್ದು ಮಹಿಳೆ ಮೃತಪಟ್ಟ ಘಟನೆ ಸಂಪಾಜೆ ಗ್ರಾಮದ ಕೊಯನಾಡಿನಲ್ಲಿ ನಡೆದಿದೆ.

ಮೃತಪಟ್ಟ ಮಹಿಳೆಯನ್ನು ದಿ. ಅಣ್ಣು ದಾಸ್ ಅವರ ಧರ್ಮ ಪತ್ನಿ ಯಶೋದ ದಾಸ್ (60 ವ.) ಎಂದು ಗುರುತಿಸಲಾಗಿದೆ. ಅವರಿಗೆ ಕೆಲವು ವರ್ಷಗಳ ಹಿಂದೆ ಸ್ಟೋಕ್ ಮತ್ತು ಹೃದಯ ಸಂಬಂಧಿತ ಕಾಯಿಲೆ ಇದ್ದು, ಮಂಗಳೂರಿನ ಯೂನಿಟಿ ಆಸ್ಪತ್ರೆಯಲ್ಲಿ ಆಪರೇಶನ್ ಮಾಡಿ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಮನೆಗೆ ಕರೆದುಕೊಂಡು ಬರಲಾಗಿತ್ತು.

ತನ್ನ ಮಗನಾದ ಉಮೇಶ್ ಅವರು ಪೇಟೆಗೆ ಹೋಗಿ ವಾಪಸು ಬಂದಾಗ ಮಹಿಳೆ ಮನೆಯಲ್ಲಿ ಇರಲಿಲ್ಲ. ಕೂಡಲೇ ಅಕ್ಕ ಪಕ್ಕದವರ ಮನೆಯವರಿಗೆ ವಿಷಯವನ್ನು ತಿಳಿಸಿದ್ದು, ಹುಡುಕಾಟದಲ್ಲಿ ಮನೆಯ ಪಕ್ಕದ ಹೊಳೆಯಲ್ಲಿ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಸಂಪಾಜೆ ಪೋಲಿಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

You may also like