Mangalore: ಮಂಗಳೂರಿನ ಗುಂಪು ಹತ್ಯೆ ಪ್ರಕರಣದಲ್ಲಿ 20 ಮಂದಿಯನ್ನು ಬಂಧನ ಮಾಡಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ.
ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದ್ದಕ್ಕೆ ಹೊಡೆದಿದ್ದಾರೆ. ಅವನು ಜಿಂದಾಬಾದ್ ಘೋಷಣೆ ಕೂಗಿದ್ದಾನೋ ಗೊತ್ತಿಲ್ಲ. ಈ ಕುರಿತು ಕೇಸು ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಈ ಪ್ರಕರಣದಲ್ಲಿ 20 ಮಂದಿಯ ಬಂಧನವಾಗಿದೆ ಎಂದು ಬೆಂಗಳೂರಿನಲ್ಲಿ ಗೃಹಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಭಾನುವಾರ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆದಿದ್ದು, ಆತನ ಸಾವಿಗೆ ಕಾರಣರಾದ ಆರೋಪದಲ್ಲಿ ಮಂಗಳೂರು ಪೊಲೀಸರು ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ ಅಡಿಯಲ್ಲಿ 20 ಜನರನ್ನು ಬಂಧನ ಮಾಡಿದ್ದಾರೆ.
35 ರಿಂದ 40 ವರ್ಷದ ವ್ಯಕ್ತಿ ಸಾವಿಗೀಡಾಗಿದ್ದು ಎಂದು ಪ್ರಾಥಮಿಕ ಹಂತದಲ್ಲಿ ತಿಳಿದು ಬಂದಿದೆ. ಕೇರಳದ ವಯನಾಡ್ ಜಿಲ್ಲೆಯ ಸುಲ್ತಾನ್ ಬತ್ತೇರಿ ತಾಲ್ಲೂಕಿನ ಪುಲ್ಪಲ್ಲಿ ಗ್ರಾಮದ ನಿವಾಸಿ ಅಶ್ರಫ್ ಎಂದು ಗುರುತಿಸಲಾಗಿದೆ.
