Home » Mangaluru : ಫಾಜಿಲ್ ಹತ್ಯೆ ಪ್ರಕರಣ- ಸೇಡಿಗೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಬರ್ಬರ ಹತ್ಯೆ !!

Mangaluru : ಫಾಜಿಲ್ ಹತ್ಯೆ ಪ್ರಕರಣ- ಸೇಡಿಗೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಬರ್ಬರ ಹತ್ಯೆ !!

0 comments

Mangaluru : ಮಂಗಳೂರಿನ ಬಜ್ಪೆ ಕಿನ್ನಿಪದವು ಬಳಿ ಹಿಂದೂ ಕಾರ್ಯಕರ್ತ ಹಾಗೂ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ನಡೆದ ಮೊಹಮ್ಮದ್ ಫಾಜಿಲ್ ಹತ್ಯೆಯ ಆರೋಪಿ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ.

ಹೌದು, 2022 ರ ಜುಲೈ 28 ರಂದು ಸುರತ್ಕಲ್‌ನಲ್ಲಿ ಮೊಹಮ್ಮದ್ ಫಾಜಿಲ್ ಎಂಬ ಯುವಕನ ಬರ್ಬರ ಹತ್ಯೆ ನಡೆದಿತ್ತು. ಈ ಹತ್ಯೆಯು ಅದಕ್ಕೂ ಮುನ್ನ ನಡೆದಿದ್ದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ನಡೆದಿದೆ ಎಂದು ಆರೋಪಿಸಲಾಗಿತ್ತು. ಈ ಪ್ರಕರಣದಲ್ಲಿ ಸುಹಾಸ್ ಶೆಟ್ಟಿ ಪ್ರಮುಖ ಆರೋಪಿಯಾಗಿದ್ದನು. ಇದೀಗ ಸುರತ್ಕಲ್‌ನ ಫಾಜಿಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹಾಗೂ ರೌಡಿ ಶೀಟರ್ ಆಗಿರುವ ಸುಹಾಸ್ ಶೆಟ್ಟಿಯನ್ನು ಕೊಚ್ಚಿ ಕೊಲೆ ಮಾಡಲಾಗಿದೆ.

ಮಂಗಳೂರು ಹೊರವಲಯದ ಬಜ್ಪೆ ಸಮೀಪದ ಕಿನ್ನಿಪದವು ಎಂಬಲ್ಲಿ ನಡೆದಿದೆ. ಮಾರಣಾಂತಿಕ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಸುಹಾಸ್‌ನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದೀಗ ಆತ ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ.

ಅಂದಹಾಗೆ ಸುಹಾಸ್ ಶೆಟ್ಟಿ ಈ ಹಿಂದೆ ಬಜರಂಗದಳದ ಕಾರ್ಯಕರ್ತನಾಗಿದ್ದನು. ಸಹಾಸ್​ ಶೆಟ್ಟಿ ವಿರುದ್ಧ ಹಲವು ಕೊಲೆ, ಕೊಲೆಯತ್ನ ಕೇಸ್​ಗಳು ದಾಖಲಾಗಿದ್ದವು. ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

You may also like