8
SSLC Result: 2024-25ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಇಂದು ಬೆಳಗ್ಗೆ 11.30ಕ್ಕೆ ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ಮೂಲಕ ಪ್ರಕಟಿಸಲಿದ್ದಾರೆ.
ಮಧ್ಯಾಹ್ನ 12.30ರ ನಂತರ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ವಿದ್ಯಾರ್ಥಿಗಳು ಈ ಫಲಿತಾಂಶ ವೀಕ್ಷಿಸಬಹುದಾಗಿದೆ. ಉತ್ತೀರ್ಣರಾಗದಿದ್ದರೆ ಅಥವಾ ಉತ್ತಮ ಅಂಕ ಲಭಿಸದಿದ್ದರೆ ವಿದ್ಯಾರ್ಥಿಗಳು ಇನ್ನು ಎರಡು ಬಾರಿ ಪರೀಕ್ಷೆ ಬರೆಯಬಹುದಾಗಿದೆ.
ಎಸ್ಎಸ್ಎಲ್ಸಿ ಫಲಿತಾಂಶವನ್ನು ಆನ್ಲೈನ್ನಲ್ಲಿ ನೋಡುವ ರೀತಿ ಇಲ್ಲಿದೆ;
https://karresults.nic.in/ ಮತ್ತು kseab.karnataka.gov.in ಭೇಟಿ ನೀಡಿ.
‘SSLC ಫಲಿತಾಂಶ 2025’ ಲಿಂಕ್ ಅನ್ನು ಕ್ಲಿಕ್ ಮಾಡಬೇಕು.
SSLC ನೋಂದಣಿ ಸಂಖ್ಯೆಯನ್ನು ನಮೂದಿಸಿ ಮತ್ತು ಸಬ್ಮೀಟ್ ಮೇಲೆ ಕ್ಲಿಕ್ ಮಾಡಿ.
ನಂತರ ವಿಷಯವಾರು ಅಂಕಗಳೊಂದಿಗೆ ಫಲಿತಾಂಶ ಪ್ರದರ್ಶನಗೊಳ್ಳುತ್ತದೆ.
ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು
