Home » Mangaluru: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ:ಕಮಿಷನರ್ ಫಸ್ಟ್ ರಿಯಾಕ್ಷನ್?!

Mangaluru: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ:ಕಮಿಷನರ್ ಫಸ್ಟ್ ರಿಯಾಕ್ಷನ್?!

0 comments

Mangaluru: ಮಂಗಳೂರಿನಲ್ಲಿ (Mangaluru) ಬಜ್ಪೆ ಕಿನ್ನಿ ಪದವು ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಸ್ನೇಹಿತರೊಂದಿಗೆ ಬರುತ್ತಿದ್ದ ವೇಳೆ ಕಾರಿಗೆ ಮಿನಿ ಟೆಂಪೋ ಗುದ್ದಿಸಿ ಬಳಿಕ ಬರ್ಬರವಾಗಿ ಕೊಲೆ ಮಾಡಲಾಗಿದೆ.

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಬಗ್ಗೆ ಮಂಗಳೂರು ಪೊಲೀಸ್‌ ಕಮಿಷನ‌ರ್ ಅನುಪಮ್ ಅಗರ್ವಾಲ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಇನೋವಾ ಕಾರಿನಲ್ಲಿ ಸಹಚರರ ಜೊತೆ ತೆರಳುತ್ತಿದ್ದ ಸುಹಾಸ್‌ ಕಾರು ಅಡ್ಡಗಟ್ಟಿ ತಲ್ವಾರ್ಗಳಿಂದ ಹಲ್ಲೆ ಮಾಡಿದ್ದಾರೆ. ಗೂಡ್ಸ್ ವಾಹನ, ಕಾರಿನಲ್ಲಿ ಬಂದು ಸುಹಾಸ್ ಹತ್ಯೆಗೈದಿದ್ದಾರೆ. ಮುಖ್ಯವಾಗಿ ಸುಹಾಸ್ ಶೆಟ್ಟಿಯನ್ನೇ ಟಾರ್ಗೆಟ್ ಮಾಡಿ ಕೊಲೆ ಮಾಡಿದ್ದಾರೆ. ಈ ಸಂಬಂಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಶುರು ಮಾಡಲಾಗಿದ್ದು, ಆರೋಪಿಗಳ ಪತ್ತೆಗಾಗಿ ತಂಡ ರಚಿಸುತ್ತೇವೆ. ಇನ್ನು ಪೊಲೀಸ್ ಅಧಿಕಾರಿಗಳ ಜೊತೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ. ಜೊತೆಗೆ ಮಂಗಳೂರು ನಗರದಲ್ಲಿ ಹೆಚ್ಚಿನ ಬಂದೋಬಸ್ತ್ ಕಲ್ಪಿಸಲಾಗುತ್ತೆ. ಇದು ಪ್ರತೀಕಾರದ ಹತ್ಯೆ ಎಂದು ಮೇಲ್ನೋಟಕ್ಕೆ ಕಾಣುತ್ತಿದೆ ಎಂದು ತಿಳಿಸಿದರು.

You may also like