Home » Shivananda Patil: ಯತ್ನಾಳ್ ಹಾಕಿದ ಸವಾಲು ಸ್ವೀಕರಿಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಸಚಿವ ಶಿವಾನಂದ ಪಾಟೀಲ್- ಹಾಗಿದ್ರೆ ಯತ್ನಾಳ್ ಹಾಕಿದ ಸವಾಲು ಏನು?

Shivananda Patil: ಯತ್ನಾಳ್ ಹಾಕಿದ ಸವಾಲು ಸ್ವೀಕರಿಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಸಚಿವ ಶಿವಾನಂದ ಪಾಟೀಲ್- ಹಾಗಿದ್ರೆ ಯತ್ನಾಳ್ ಹಾಕಿದ ಸವಾಲು ಏನು?

0 comments

Shivananda Patil: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸವಾಲು ಸ್ವೀಕರಿಸಿರುವ ಸಚಿವ ಶಿವಾನಂದ ಪಾಟೀಲ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.

ಹೌದು, ಯತ್ನಾಳ್ ಹಾಕಿದ ಆ ಒಂದೇ ಒಂದು ಸವಾಲಿಗೆ ರೊಚ್ಚಿಗೆದ್ದ ಕಾಂಗ್ರೆಸ್​ ನಾಯಕ ಶಿವಾನಂದ ಪಾಟೀಲ್ ಅವರು ತಮ್ಮ ಶಾಸಕ ಸ್ಥಾನಕ್ಕೆ ಇಂದು (ಮೇ 02) ಇಂದು ಬೆಳಗ್ಗೆ ಸ್ಪೀಕರ್ ಯುಟಿ ಖಾದರ್​ ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.

ಯತ್ನಾಳ್ ಹಾಕಿದ ಸವಾಲು ಏನು?

ವಿಜಯಪುರ ನಗರ ಶಾಸಕರಾದ ಬಸವನಗೌಡ ಆರ್. ಪಾಟೀಲ ಯತ್ನಾಳ್ ಅವರು ತಮ್ಮ ವಿಜಯಪುರ ಮತಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ಶಿವಾನಂದ ಪಾಟೀಲ್ ವಿರುದ್ಧ ಬಸವನ ಬಾಗೇವಾಡಿ ಮತಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಸವಾಲು ಹಾಕಿದ್ದರು.

ರಾಜೀನಾಮೆ ಪತ್ರದಲ್ಲೇನಿದೆ:”ವಿಜಯಪುರ ನಗರ ಶಾಸಕರಾದ ಬಸನಗೌಡ ಆರ್. ಪಾಟೀಲ್ (ಯತ್ನಾಳ್) ರವರು ತಮ್ಮ ವಿಜಯಪುರ ಮತ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ನನ್ನ ವಿರುದ್ಧ ಬಸವನ ಬಾಗೇವಾಡಿ ಮತಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಸವಾಲು ಹಾಕಿದ್ದಾರೆ. ನಾನು ಅವರ ಸವಾಲನ್ನು ಸ್ವೀಕರಿಸಿ, ಅವರ ವಿರುದ್ಧ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಹಾಗಾಗಿ, ನಾನು ಪ್ರತಿನಿಧಿಸುತ್ತಿರುವ ಬಸವನ ಬಾಗೇವಾಡಿ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ಆದುದರಿಂದ, ಬಸನಗೌಡ ಆರ್. ಪಾಟೀಲ್ (ಯತ್ನಾಳ್) ರವರು ಸವಾಲು ಹಾಕಿರುವಂತೆ ಅವರ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕು. ಅವರ ರಾಜೀನಾಮೆ ಅಂಗೀಕಾರವಾದರೆ ಮಾತ್ರ, ದಯಮಾಡಿ ನನ್ನ ರಾಜೀನಾಮೆಯನ್ನೂ ಅಂಗೀಕರಿಸುವಂತೆ ತಮ್ಮಲ್ಲಿ ಕೋರುತ್ತೇನೆ” ಎಂದು ಶಿವಾನಂದ ಪಾಟೀಲ್ ಸ್ಪೀಕರ್ ಅವರನ್ನು ಕೋರಿದ್ದಾರೆ.

You may also like