Home » Puttur: ಬಸ್‌ ನಿಲ್ದಾಣದ ಬಳಿ ಬಲವಂತವಾಗಿ ಅಂಗಡಿ ಮುಚ್ಚಿಸಿದ ಪ್ರಕರಣ; 30ಜನರ ವಿರುದ್ಧ ಪ್ರಕರಣ!

Puttur: ಬಸ್‌ ನಿಲ್ದಾಣದ ಬಳಿ ಬಲವಂತವಾಗಿ ಅಂಗಡಿ ಮುಚ್ಚಿಸಿದ ಪ್ರಕರಣ; 30ಜನರ ವಿರುದ್ಧ ಪ್ರಕರಣ!

0 comments

Puttur: ಮೇ. 2 ರಂದು ನಿಷೇಧಾಜ್ಞೆ ಜಾರಿಯಲ್ಲಿದ್ದಾಗ ಪುತ್ತೂರು ಗಾಂಧಿಕಟ್ಟೆಯ ಬಳಿ ಸುಮಾರು 20 ರಿಂದ 30 ಜನ ಅಕ್ರಮ ಕೂಟ ಸೇರಿಕೊಂಡು ಬಸ್‌ ನಿಲ್ದಾಣದ ಅಕ್ಕಪಕ್ಕದಲ್ಲಿರುವ ಅಂಗಡಿ ಮುಗ್ಗಟ್ಟುಗಳನ್ನು ಬಲವಂತವಾಗಿ ಮುಚ್ಚಿಸಿದ, ದೊಂಬಿ ಎಬ್ಬಿಸಿ ನಿಷೇಧಾಜ್ಞೆ ಉಲ್ಲಂಘನೆ ಮಾಡಿರುವ ನಿಟ್ಟಿನಲ್ಲಿ 30 ಮಂದಿಯ ವಿರುದ್ಧ ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ಘಟಕ ವ್ಯಾಪ್ತಿಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲೂಕಿನಾದ್ಯಂತ ಮೇ 2 ರಿಂದ 5 ರ ತನಕ ಜಿಲ್ಲಾಧಿಕಾರಿಯವರು ನಿಷೇಧಾಜ್ಞೆ ಜಾರಿ ಮಾಡಿದ್ದರು.

You may also like