7
Puttur: ಮೇ 11 (ಇಂದು) ರ ಬೆಳಿಗ್ಗೆ ಮಾಣಿ-ಮೈಸೂರು ಹೆದ್ದಾರಿಯ ಕಲ್ಲರ್ಪೆಯ ಕಾರ್ಪಾಡಿ ದ್ವಾರದ ಬಳಿ ಮೂರು ಕಾರುಗಳು ಮತ್ತು ಒಂದು ದ್ವಿಚಕ್ರ ವಾಹನದ ನಡುವೆ ಸರಣಿ ಅಪಘಾತ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರನಿಗೆ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆಯಲಿದ್ದ ಮದುವೆ ಸಮಾರಂಭಕ್ಕೆ ಹೋಗಲು ತೆರಳಿದ್ದ ಕಾರು ಕೂಡಾ ಇದರಲ್ಲಿ ಅಪಘಾತಕ್ಕೀಡಾಗಿದೆ ಎಂದು ವರದಿಯಾಗಿದೆ.
ನಾಯಿಯೊಂದು ಅಡ್ಡ ಬಂದಿದ್ದು, ಅದನ್ನು ತಪ್ಪಿಸಲು ಚಾಲಕ ಬ್ರೇಕ್ ಹಾಕಿದಾಗ ಈ ಸರಣಿ ಅಪಘಾತ ನಡೆದಿದೆ ಎನ್ನಲಾಗಿದೆ. ಮದುವೆ ಕಾರ್ಯಕ್ರಮಕ್ಕೆ ಹೋಗುತ್ತಿದ್ದ ಓಮ್ನಿ ಕಾರು, ಇನ್ನೆರಡು ಕಾರುಗಳು ಹಾಗೂ ಒಂದು ದ್ವಿಚಕ್ರ ವಾಹನ ಜಖಂಗೊಂಡಿದೆ. ಈ ಘಟನೆಯಲ್ಲಿ ಬೈಕ್ ಸವಾರನಿಗೆ ಗಾಯಗಳಾಗಿದ್ದು, ಕಾರಿನಲ್ಲಿದ್ದ ಉಳಿದವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
