Home » Mangaluru: ಮಂಗಳೂರು: ‘ಸುಳ್ಳು ಸುದ್ದಿ ಅಥವಾ ತಪ್ಪು ಮಾಹಿತಿ ಹರಡಿದರೆ ಕಠಿಣ ಕ್ರಮ’-ದಿನೇಶ್ ಗುಂಡೂರಾವ್!

Mangaluru: ಮಂಗಳೂರು: ‘ಸುಳ್ಳು ಸುದ್ದಿ ಅಥವಾ ತಪ್ಪು ಮಾಹಿತಿ ಹರಡಿದರೆ ಕಠಿಣ ಕ್ರಮ’-ದಿನೇಶ್ ಗುಂಡೂರಾವ್!

0 comments

Mangaluru: ಇಂಡಿಯಾ ಮತ್ತು ಪಾಕಿಸ್ತಾನಗಳ ನಡುವೆ ಉದ್ವಿಗ್ನ ಸ್ಥಿತಿಯ ಈ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡಿದರೆ, ಸುಳ್ಳು ಸುದ್ದಿ ಹಬ್ಬಿಸಿದರೆ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇಂತಹ ಕೃತ್ಯಗಳನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಶನಿವಾರದಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸೈನಿಕರಿಗೆ ಆತ್ಮಸ್ಥೆರ್ಯ ತುಂಬುವ ಕೆಲಸ ಮಾಡಬೇಕು. ದೇಶದ ವಿಚಾರ ಬಂದಾಗ ನಾವೆಲ್ಲಾ ಒಂದೇ ಎಂದರು.ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಕುರಿತು ಮಾತನಾಡಿದ ಅವರು, ಪ್ರಕರಣದ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಸಮರ್ಪಕ ತನಿಖೆ ನಡೆಸುತ್ತಿದ್ದಾರೆ. ಹಾಗಾಗಿ ಇದನ್ನು ಎನ್‌ಐಎಗೆ ವಹಿಸಬೇಕೆ ಬೇಡವೆ ಎಂಬ ಬಗ್ಗೆ ಯೋಚಿಸಬೇಕಿದೆ. ಪೊಲೀಸರು ಈಗಾಗಲೇ ಪ್ರಕರಣದ ಮೂಲ ತಿಳಿಯುವಲ್ಲಿಯೂ ಯಶಸ್ವಿಯಾಗಿದ್ದು, ಬೇರೆ ಯಾರಾದರೂ ಇದ್ದಾರೆಯೇ ಎಂಬ ಬಗ್ಗೆಯೂ ತನಿಖೆ ನಡೆಸುತ್ತಿದ್ದಾರೆ. ಬಿಜೆಪಿಯವರು ಎನ್‌ಐಎ ತನಿಖೆಗೆ ಒತ್ತಾಯಿಸಿದ್ದಾರೆ. ಈ ಬಗ್ಗೆ ಸರ್ಕಾರ ತೀರ್ಮಾನಿಸಲಿದೆ. ಬಿಜೆಪಿಯವರ ಬಳಿ ಸ್ಪಷ್ಟ ಮಾಹಿತಿ ಇದ್ದರೆ ನೀಡಲಿ, ಪೊಲೀಸರು ಕ್ರಮ ಕೈಗೊಳ್ಳುತ್ತಾರೆ. ಅವರ ಊಹಾಪೋಹಗಳಿಗೆ ಉತ್ತರ ನೀಡಲಾಗದು ಎಂದು ಹೇಳಿದರು.

You may also like