2
Bantwala : ಬುದ್ಧಿವಂತರ ಜಿಲ್ಲೆ ಎಂದು ಖ್ಯಾತಿ ಪಡೆದಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿನಿತ್ಯವೂ ಒಂದಲ್ಲ ಒಂದು ಕ್ರೈಂ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಇದೀಗ ಬಂಟ್ವಾಳದಲ್ಲಿ ನಾಲ್ಕು ಜನರ ತಂಡ ಒಂದು ಬಂದು ಯುವಕನಿಗೆ ಚೂರಿ ಇರಿದು ಪರಾರಿಯಾದ ಪ್ರಕರಣ ಬೆಳಕಿಗೆ ಬಂದಿದೆ.
ಪಾಣೆಮಂಗಳೂರು ಸಮೀಪದ ಅಕ್ಕರಂಗಡಿ ಬಸ್ಸು ನಿಲ್ದಾಣ ಬಳಿ ಶುಕ್ರವಾರ ರಾತ್ರಿ ಸಂಭವಿಸಿದ್ದು, ಚೂರಿ ಇರಿತಕ್ಕೊಳಗಾದ ಯುವಕನನ್ನು ಇಲ್ಲಿನ ನಿವಾಸಿ, ಪೈಂಟರ್ ವೃತ್ತಿಯ ಹಮೀದ್ ಯಾನೆ ಅಮ್ಮಿ ಎಂದು ತಿಳಿದುಬಂದಿದೆ.
ಇರಿತದಿಂದ ಹಮೀದ್ ಅವರ ಕೈಗೆ ಗಂಭೀರ ಗಾಯವಾಗಿದ್ದು, ಅವರನ್ನು ಸ್ಥಳೀಯರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
