Home » ದ್ವಿತೀಯ ಪಿಯುಸಿ ಪರೀಕ್ಷೆ-2 ರ ಫಲಿತಾಂಶ ಪ್ರಕಟ: ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದಲ್ಲಿ ಹಲವು ರಾಂಕ್ ಗಳು 

ದ್ವಿತೀಯ ಪಿಯುಸಿ ಪರೀಕ್ಷೆ-2 ರ ಫಲಿತಾಂಶ ಪ್ರಕಟ: ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದಲ್ಲಿ ಹಲವು ರಾಂಕ್ ಗಳು 

0 comments

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಳೆದ ಏಪ್ರಿಲ್‌ನಲ್ಲಿ ನಡೆಸಿದಂತಹ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ರ ಫಲಿತಾಂಶ ಪ್ರಕಟಗೊಂಡಿದ್ದು, ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ರೀತಿಯಲ್ಲಿ ಸಾಧನೆಯನ್ನು ಮಾಡಿರುತ್ತಾರೆ.

ವಿಜ್ಞಾನ ವಿಭಾಗದಲ್ಲಿ ಶ್ರೀರಕ್ಷಾ 596 ಅಂಕಗಳೊಂದಿಗೆ ರಾಜ್ಯಕ್ಕೆ 5ನೇ‌ ರಾಂಕ್ ಪಡೆದಿದ್ದು, ಇವರು ಬಾಯಾರಿನ ಗಣಪತಿ ಭಟ್‌ ಹಾಗೂ ಗಾಯತ್ರಿ ದಂಪತಿಗಳ ಪುತ್ರಿಯಾಗಿರುತ್ತಾರೆ. ಮತ್ತು ಅನಘಾ ಡಿ ಶೆಟ್ಟಿ 595 ಅಂಕಗಳೊಂದಿಗೆ ರಾಜ್ಯಕ್ಕೆ 6ನೇ ರಾಂಕ್ ಪಡೆದುಕೊಂಡಿದ್ದು, ಇವರು ಪುತ್ತೂರಿನ ದಿನೇಶ್‌ ಶೆಟ್ಟಿ ಹಾಗೂ ಸವಿತಾ ಡಿ. ಶೆಟ್ಟಿ ದಂಪತಿಗಳ ಪುತ್ರಿಯಾಗಿರುತ್ತಾರೆ. ಹಾಗೂ ಆಕಾಶ್‌ ( ಪಾಣೆಮಂಗಳೂರಿನ ಚಂದ್ರಶೇಖರ ಹಾಗೂ ಲೀಲಾ ದಂಪತಿಗಳ ಪುತ್ರ) ಹಾಗೂ ಯಶ್ವಿತಾ ಕುಲಾಲ್ (ಇವರು ಬಂಟ್ವಾಳ ತಾಲೂಕಿನ ದಿನೇಶ್‌ ಕೆ ಹಾಗೂ ಸುಮತಿ ದಂಪತಿಗಳ ಪುತ್ರಿ) ತಲಾ 591 ಅಂಕಗಳೊಂದಿಗೆ 10ನೇ ರಾಂಕ್‌ ಅನ್ನು ಪಡೆದಿರುತ್ತಾರೆ.

ಇತ್ತೀಚೆಗೆ ಪ್ರಕಟಗೊಂಡ ಫಲಿತಾಂಶದಲ್ಲಿ ವಾಣಿಜ್ಯ ವಿಭಾಗದಲ್ಲಿ ಅನುಶ್ರೀ (ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ಪಿ. ಸತೀಶ್‌ಮರಡಿತ್ತಾಯ ಹಾಗೂ ದೀಪಾ ದಂಪತಿಗಳ ಪುತ್ರಿ) 597 ಅಂಕಗಳೊಂದಿಗೆ ರಾಜ್ಯಕ್ಕೆ 3ನೇ ರಾಂಕ್ ಹಾಗೂ ತಾಲೂಕಿಗೆ ಪ್ರಥಮ ಸ್ಥಾನವನ್ನು ಪಡೆದಿದ್ದರೆ, ಯುಕ್ತಶ್ರೀ(ಬೆಂಗಳೂರಿನ ಪಿ ಹೇಮಚಂದ್ರ ಹಾಗೂ ಹೈಮಿತಾ ಪಿ ದಂಪತಿಗಳ ಪುತ್ರಿ) 593 ಅಂಕಗಳನ್ನು ಪಡೆದು ‌ರಾಜ್ಯಕ್ಕೆ 5ನೇ ರಾಂಕ್ ಹಾಗೂ ಜಿಲ್ಲೆಗೆ ಪ್ರಥಮ ಸ್ಥಾನದಲ್ಲಿರುತ್ತಾರೆ.

ಈ ನಿಟ್ಟಿನಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು,ಉಪಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.

You may also like