Mangaluru: ವಿದೇಶದಲ್ಲಿ ಉದ್ಯೋಗ ನೀಡುವುದಾಗಿ ಆಮಿಷವೊಡ್ಡಿ 300ಕ್ಕೂ ಹೆಚ್ಚು ಜನರಿಗೆ ವಂಚನೆ ಮಾಡಿದ ಘಟನೆ ನಡೆದಿದೆ. ನಗರದ ಬೆಂದೂರ್ವೆಲ್ನಲ್ಲಿ ಕಚೇರಿ ಹೊಂದಿರುವ ಸಂಸ್ಥೆಯೊಂದು ವಂಚನೆ ಮಾಡಿರುವುದಾಗಿ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷ ಲಾರೆನ್ಸ್ ಡಿಸೋಜ ಆರೋಪ ಮಾಡಿದರು.
ಕರ್ನಾಟಕ, ಕೇರಳ, ತಮಿಳುನಾಡು, ಗೋವಾ ರಾಜ್ಯದ ಉದ್ಯೋಗಾಕಾಂಕ್ಷಿಗಳು ಮೋಸ ಹೋಗಿದ್ದಾರೆ. ಹೈಯರ್ ಗ್ಲೋ ಎಲಿಗಂಟ್ ಓವರ್ಸೀಸ್ ಇಂಟರ್ನ್ಯಾಷನಲ್ ಪ್ರೈವೇಟ್ ಲಿಮಿಟೆಡ್ ಎಂಬ ಸಂಸ್ಥೆ ನ್ಯೂಝಿಲೆಂಡ್ನ ವಲರಿಸ್ ಎಂಬ ಸಂಸ್ಥೆಯಲ್ಲಿ ಕೆಲಸ ಕೊಡುವುದಾಗಿ ನಂಬಿಕೆ ಹುಟ್ಟಿಸಿ ದಕ್ಷಿಣ ಕನ್ನಡ ಜಿಲ್ಲೆಯ ಸುಮಾರು 185 ಜನರಿಂದ 1.80 ಲಕ್ಷ, ಏಜೆಂಟರ ಮೂಲಕ ಬಂದ 60 ಜನರಿಂದ ತಲಾ 3 ಲಕ್ಷ, ಇತರ ರಾಜ್ಯಗಳ ಏಜೆಂಟರ ಮೂಲಕ ಬಂದ ತಲಾ ರೂ.4ರಿಂದ 5 ಲಕ್ಷ ಹಣವನ್ನು ಆನ್ಲೈನ್ ಮೂಲ ಸಂಗ್ರಹ ಮಾಡಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಇಂದು (ಸೋಮವಾರ) ಹೇಳಿದರು.
ಉದ್ಯೋಗಕ್ಕಾಗಿ ವಿದೇಶಕ್ಕೆ ತೆರಳುವವರು ತಾವು ಸಂಪರ್ಕ ಮಾಡುವ ಏಜೆಂಟರು ಅಥವಾ ಏಜೆನ್ಸಿಗಳು ಬೆಂಗಳೂರಿನಲ್ಲಿರುವ ವಿದೇಶಾಂಗ ಇಲಾಖೆಯ ಪ್ರೊಟೆಕ್ಟರ್ ಆಫ್ ಎಮಿಗ್ರೇಟ್ಸ್ ಅಡಿಯಲ್ಲಿ ನೋಂದಣಿ ಮಾಡಿಕೊಂಡಿದ್ದಾರೆಯೇ ಎನ್ನುವುದನ್ನು ಖಚಿತ ಮಾಡಿಕೊಳ್ಳಬೇಕು ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು.
