9
Chikkamagaluru: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಡವನದಿಣ್ಣೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಭಾರೀ ಮಳೆಯಿಂದಾಗಿ ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್‌ವೊಂದು ಕಾರಿಗೆ ಡಿಕ್ಕಿ ಹೊಡೆದು ರಸ್ತೆ ಬದಿಗೆ ನುಗ್ಗಿದ ಘಟನೆ ಇಂದು ನಡೆದಿದೆ.
ಮೂಡಿಗೆರೆ, ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಬಣಕಲ್ ಇನ್ನಿತರ ಕಡೆಗಳಲ್ಲಿ ಇಂದು ಮಳೆ ನಿರಂತರವಾಗಿ ಸುರಿಯುತ್ತಿದ್ದು, ಈ ಸಂದರ್ಭದಲ್ಲೇ ಈ ಅಪಘಾತ ಸಂಭವಿಸಿದೆ. ಬಸ್ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬಸ್ ಎದುರಿನಿಂದ ಬಂದ ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ನಂತರ ರಸ್ತೆ ಬದಿಗೆ ಜಾರಿ ಬಿದ್ದಿದೆ.
ಈ ಅಪಘಾತದಲ್ಲಿ ಕಾರು ಚಾಲಕ ಸೇರಿ ಬಸ್‌ನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯವಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಯಾವುದೇ ಪ್ರಾಣ ಹಾನಿ ಆಗಿಲ್ಲ.
ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
