Home » Coronavirus: ಕರ್ನಾಟಕದಲ್ಲಿ ಕೋವಿಡ್‌ ಪ್ರಕರಣ: ಸರಕಾರದಿಂದ ಮಾರ್ಗಸೂಚಿ ಬಿಡುಗಡೆ

Coronavirus: ಕರ್ನಾಟಕದಲ್ಲಿ ಕೋವಿಡ್‌ ಪ್ರಕರಣ: ಸರಕಾರದಿಂದ ಮಾರ್ಗಸೂಚಿ ಬಿಡುಗಡೆ

0 comments
Coronavirus JN 1 Variant

Coronavirus: ಕರ್ನಾಟಕದಲ್ಲಿ ಕೊರೊನಾ ವೈರಸ್‌ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಆರೋಗ್ಯ ಇಲಾಖೆ ಹೊಸದಾಗಿ ಕೋವಿಡ್‌-19 ಮಾರ್ಗಸೂಚಿ ಬಿಡುಗಡೆ ಮಾಡಿದೆ. ಕಳೆದ 20 ದಿನಗಳಲ್ಲಿ ಕೋವಿಡ್‌ ಪ್ರಕರಣಗಳಲ್ಲಿ ಏಕಾಏಕಿ ಹೆಚ್ಚಳ ಕಂಡು ಬಂದಿದೆ.

ಗರ್ಭಿಣಿಯರು, ಮಕ್ಕಳು, ಇತರ ಕಾಯಿಲೆಗಳಿಂದ ಬಳಲುತ್ತಿರುವವರು ಮತ್ತು ರೋಗನಿರೋಧಕ ಶಕ್ತಿ ಕಡಿಮೆ ಇರುವವರು ಜನದಟ್ಟಣೆ ಇರುವ ಪ್ರದೇಶಗಳಲ್ಲಿ ಫೇಸ್ ಮಾಸ್ಕ್ ಧರಿಸಿ ಓಡಾಡಲು ಸೂಚನೆ ನೀಡಲಾಗಿದೆ. ಸಾರ್ವಜನಿಕರು ಕೈಗಳ ನೈರ್ಮಲ್ಯವನ್ನು ಕಾಪಾಡಿಕೊಳ್ಳಲು ಮತ್ತು ನಿಯಮಿತವಾಗಿ ಹ್ಯಾಂಡ್ ಸ್ಯಾನಿಟೈಸರ್‌ಗಳನ್ನು ಬಳಸಲು ಸಲಹೆ ನೀಡಲಾಗಿದೆ.

ತೀವ್ರ ಉಸಿರಾಟದ ಕಾಯಿಲೆಯ ಲಕ್ಷಣಗಳನ್ನು ಹೊಂದಿರುವವರು ಸಕಾಲಿಕವಾಗಿ ಚಿಕಿತ್ಸೆಯನ್ನು ಪಡೆಯಬೇಕು. ಸಂಭಾವ್ಯ ಅಪಾಯ ತಡೆಗಟ್ಟಲು ಕೋವಿಡ್ -19 ಪರೀಕ್ಷೆಯನ್ನು ತಕ್ಷಣವೇ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಲಾಗಿದೆ.

 

You may also like