Home » Tiruvananthapuram: ಸರಕು ಸಾಗಣೆ ಹಡಗಿನಲ್ಲಿದ್ದ ತೈಲ ಕಂಟೇನರ್‌ಗಳು ಸಮುದ್ರಪಾಲು

Tiruvananthapuram: ಸರಕು ಸಾಗಣೆ ಹಡಗಿನಲ್ಲಿದ್ದ ತೈಲ ಕಂಟೇನರ್‌ಗಳು ಸಮುದ್ರಪಾಲು

0 comments

Tiruvananthapuram: ಕೊಚ್ಚಿಗೆ ಬರುತ್ತಿದ್ದ ಸರಕು ಸಾಗಣೆ ಹಡಗಿನಲ್ಲಿದ್ದ ತೈಲ ತುಂಬಿದ ಕಂಟೇನರ್‌ಗಳು ಸಮುದ್ರ ಪಾಲಾಗಿದ್ದು, ಸುಮಾರು 10 ಕಂಟೇನರ್‌ಗಳು ಸಮುದ್ರ ಪಾಲಾಗಿದ್ದು, ಜನರು ಆತಂಕಗೊಂಡಿದ್ದಾರೆ. ಕೊಚ್ಚಿ ಕರಾವಳಿಯಿಂದ ನೈರುತ್ಯಕ್ಕೆ 38ನಾಟಿಕಲ್‌ ಮೈಲುಗಳಷ್ಟು ದೂರದಲ್ಲಿ ಅರಬ್ಬಿ ಸಮುದ್ರದಲ್ಲಿ ಈ ಅಪಘಾತ ಸಂಭವಿಸಿದೆ.

ಕಂಟೇನರ್‌ಗಳು ದಡಕ್ಕೆ ಬಂದರೆ ಇವುಗಳ ಬಳಿ ತೆರಳದಂತೆ ಕೇರಳ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣೆ ಪ್ರಾಧಿಕಾರು ಸಾರ್ವಜನಿಕರಿಗೆ ಎಚ್ಚರಿಸಿದೆ. ರಕ್ಷಣಾ ತಂಡಗಳು ಈಗಾಗಲೇ ಸ್ಥಳಕ್ಕೆ ಧಾವಿಸಿದ್ದು, ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದೆ.

ಹಡಗಿನಲ್ಲಿದ್ದ ಎಲ್ಲಾ 24 ಸಿಬ್ಬಂದಿಗಳನ್ನು ಕರಾವಳಿ ಕಾವಲು ಪಡೆ ಮತ್ತು ನೌಕಾಪಡೆ ರಕ್ಷಣೆ ಮಾಡಿದೆ. ಕಂಟೇರ್‌ನಲ್ಲಿ ಮರೀನ್‌ ಗ್ಯಾಸ್‌ ಆಯಿಲ್‌ ಸಾಗಿಸಲಾಗುತ್ತಿತ್ತು ಎನ್ನಲಾಗಿದೆ.

 

You may also like