ನವದೆಹಲಿ: ಭಾರತವು ಆರ್ಥಿಕತೆಯಲ್ಲಿ ದಾಪುಗಾಲಿಟ್ಟು ಓಡುತ್ತಿರುವುದು ಇದೀಗ ಮತ್ತೊಮ್ಮೆ ಖಚಿತವಾಗಿದೆ. ಜಪಾನ್ ದೇಶವನ್ನು ಹಿಂದಿಕ್ಕಿ ಭಾರತ ವಿಶ್ವದ ನಾಲ್ಕನೇ ಅತಿದೊಡ್ಡ (India now world’s biggest economy) ಆರ್ಥಿಕತೆಯಾಗಿ ಹೊರಹೊಮ್ಮಿದೆ ಎಂದು ನೀತಿ ಆಯೋಗದ ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿ (ಸಿಇಒ) ಬಿ.ವಿ.ಆರ್ ಸುಬ್ರಹ್ಮಣ್ಯಂ ಶನಿವಾರ ಘೋಷಿಸಿದ್ದಾರೆ.
ಸುಬ್ರಹ್ಮಣ್ಯಂರವರು ನೀತಿ ಆಯೋಗದ 10ನೇ ಆಡಳಿತ ಮಂಡಳಿ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ಸುದ್ದಿ ಪ್ರಕಟಿಸಿ ‘ಒಟ್ಟಾರೆ ಭೌಗೋಳಿಕ ರಾಜಕೀಯ ಹಾಗೂ ಆರ್ಥಿಕ ವಾತಾವರಣವು ಭಾರತಕ್ಕೆ ಅನುಕೂಲಕರವಾಗಿದೆ’ ಎಂದು ಹೇಳಿದ್ದಾರೆ. ‘ಭಾರತವು ಈಗ ವಿಶ್ವದ 4ನೇ ಅತಿದೊಡ್ಡ ಆರ್ಥಿಕತೆಯಾಗಿದೆ. ಇದೀಗ ನಮ್ಮ ದೇಶ 4 ಟ್ರಿಲಿಯನ್ ಡಾಲರ್ ಆರ್ಥಿಕತೆ ತಲುಪಿದೆ’ ಎಂದು ಅವರು ತಿಳಿಸಿದ್ದಾರೆ.
ಸುಬ್ರಹ್ಮಣ್ಯಂ, ಐಎಂಎಫ್ ದತ್ತಾಂಶವನ್ನು ಉಲ್ಲೇಖಿಸಿ ಭಾರತದ ಆರ್ಥಿಕತೆ ಜಪಾನ್ ದೇಶವನ್ನು ಹಿಂದಿಕ್ಕಿದೆ’ ಎಂದು ಹೇಳಿದ್ದಾರೆ. ಅಮೆರಿಕ, ಚೀನಾ ಮತ್ತು ಜರ್ಮನಿ ಮಾತ್ರ ಭಾರತಕ್ಕಿಂತ ದೊಡ್ಡ ಆರ್ಥಿಕತೆಯಾಗಿದೆ. ನಾವು ನಮ್ಮ ಯೋಜನೆಗಳಲ್ಲಿ ಸ್ಥಿರತೆ ಕಾಪಾಡಿಕೊಂಡರೆ ಮುಂದಿನ ಎರಡೂವರೆ – ಮೂರು ವರ್ಷಗಳಲ್ಲಿ ವಿಶ್ವದ 3ನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಬಹುದು’ ಎಂದು ಸುಬ್ರಮಣ್ಯo ವಿಶ್ವಾಸ ವ್ಯಕ್ತಪಡಿಸಿದ್ದಾರೆ.
