6
Hassan: ಸಕಲೇಶಪುರ ತಾಲೂಕಿನಾದ್ಯಂತ ಭಾರೀ ಮಳೆಯಾಗಿದ್ದು ಶಿರಾಡಿಘಾಟ್‌ನಲ್ಲಿ ಗುಡ್ಡ ಕುಸಿತವಾಗಿದೆ. ದೊಡ್ಡತಪ್ಪಲೆ ಗ್ರಾಮದ ಬಳಿ ಗುಡ್ಡಕುಸಿತವಾಗಿದೆ. ಕಳೆದ ವರ್ಷ ಕೂಡಾ ಇದೇ ಸ್ಥಳದಲ್ಲಿ ಗುಡ್ಡ ಕುಸಿತ ಉಂಟಾಗಿದೆ. ತಡೆಗೋಡೆ ನಿರ್ಮಿಸಿದ್ರೂ ಗುಡ್ಡ ಮಣ್ಣು ಕುಸಿದಿದೆ.
ಸ್ಥಳಕ್ಕೆ ಎಸಿ ಶ್ರುತಿ, ತಹಶೀಲ್ದಾರ್ ಅರವಿಂದ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗುಡ್ಡ ಕುಸಿತ ಹೆಚ್ಚಾದರೆ ಹೆದ್ದಾರಿ ಬಂದ್ ಆಗುವ ಸಾಧ್ಯತೆ ಇದೆಯೇ? ಎನ್ನುವುದು ಇನ್ನಷ್ಟೇ ತಿಳಿದು ಬರಬೇಕಿದೆ.
