Home » Puttur: ಭಾರೀ ಮಳೆಗೆ ವಿದ್ಯುತ್ ವ್ಯತ್ಯಯ; ಕಂಬ ಮುರಿದು ಬಿದ್ದರೆ 24 ಗಂಟೆಯೊಳಗೆ ಸರಿಪಡಿಸಿ: ಶಾಸಕ ಅಶೋಕ್ ರೈ ಸೂಚನೆ

Puttur: ಭಾರೀ ಮಳೆಗೆ ವಿದ್ಯುತ್ ವ್ಯತ್ಯಯ; ಕಂಬ ಮುರಿದು ಬಿದ್ದರೆ 24 ಗಂಟೆಯೊಳಗೆ ಸರಿಪಡಿಸಿ: ಶಾಸಕ ಅಶೋಕ್ ರೈ ಸೂಚನೆ

0 comments

Puttur: ಈ ಬಾರಿ ಮೇ ತಿಂಗಳಲ್ಲೇ ಮಳೆ ಪ್ರಾರಂಭವಾಗಿದೆ, ಅದರಲ್ಲೂ ವಿಪರೀತ ಮಳೆಯಾಗುತ್ತಿದೆ, ಅಲ್ಲಲ್ಲಿ ಗಾಳಿಮಳೆಗೆ ಮರಗಳು ಮುರಿದು ಬೀಳುತ್ತಿರುವ ಕಾರಣಕ್ಕೆ ಕರೆಂಟ್ ಕಂಬಗಳು ಹಾನಿಗೊಳಗಾಗಿ ವಿದ್ಯುತ್ ಸಮಸ್ಯೆ ಉಂಟಾಗಿದೆ. ಮುರಿದು ಬಿದ್ದ ಕಂಬಗಳ ಮರುಜೋಡನೆ ಕೆಲಸ ನಡೆಯುತ್ತಿದ್ದರೂ ಕೆಲವೊಂದು ಗ್ರಾಮಗಳಲ್ಲಿ ಇನ್ನೂ ವಿದ್ಯುತ್‌ ಸಮಸ್ಯೆ ಪರಿಹಾರವಾಗಿಲ್ಲ ಈ ಬಗ್ಗೆ ಅಧಿಕಾರಿಗಳಿಗೆ ಚುರುಕುಮುಟ್ಟಿಸುವ ಉದ್ದೇಶದಿಂದ ಶಾಸಕ ಅಶೋಕ್ ರೈ ಅವರು ಪುತ್ತೂರು (puttur) ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೆಸ್ಕಾಂ ಇ ಇ ಮತ್ತು ಜೆ ಇ ಗಳ ಸಭೆ ಕರೆದು ಕೆಲವೊಂದು ಖಡಕ್ ಸೂಚನೆಗಳನ್ನು ನೀಡಿದ್ದಾರೆ.

ಮಳೆಗಾಲದಲ್ಲಿ ಗಾಳಿ, ಮಳೆ ಸಹಜ ಆದರೆ ಈ ಬಾರಿ ಕಳೆದ ನಾಲ್ಕು ದಿನಗಳ ಹಿಂದೆ ಆರಂಭವಾದ ಮಳೆ ಇನ್ನೂ ನಿಂತಿಲ್ಲ. ಅಲ್ಲಲ್ಲಿ ಮುರಿದು ಬಿದ್ದ ವಿದ್ಯುತ್‌ ಕಂಬಗಳನ್ನು 24 ಗಂಟೆಯೊಳಗೆ ದುರಸ್ಥಿ ಮಾಡಬೇಕು. ಎಲ್ಲೆಲ್ಲಿ ಲೈನ್‌ ಸಮಸ್ಯೆ ಇದೆಯೋ ಅದನ್ನು ದುರಸ್ಥಿ ಮಾಡಬೇಕು. ಕಳೆದ ನಾಲ್ಕು ದಿನಗಳಿಂದ ಎಲ್ಲೆಲ್ಲಿ ಸಮಸ್ಯೆಯಾಗಿದೆಯೋ ಅದನ್ನು ಮಂಗಳವಾರ ಮಧ್ಯಾಹ್ನದೊಳಗೆ ಸರಿಪಡಿಸಬೇಕು. ಜನರಿಗೆ ತೊಂದರೆಯಾಗದಂತೆ ಮೆಸ್ಕಾಂ ಕಾರ್ಯಪ್ರವೃತ್ತರಾಗಬೇಕು. ಗಾಳಿ ಇದೆ, ಮಳೆ ಇದೆ ಎಂಬ ಉತ್ತರ ನನಗೆ ಬೇಡ. ಮಳೆಗೆ ಏನೇ ಅನಾಹುತವಾದರೂ ಅದನ್ನು ದುರಸ್ಥಿ ಮಾಡಿ ಜನರಿಗೆ ವಿದ್ಯುತ್ ಕೊಪಡಬೇಕಾಗಿದ್ದು ನಿಮ್ಮ ಇಲಾಖೆಯವರ ಕರ್ತವ್ಯ ಎಂದು ತಿಳಿಸಿದ್ದಾರೆ.

You may also like