7
Bantwala: ಪಿಕಪ್ ಚಾಲಕನನ್ನು ಬರ್ಬರವಾಗಿ ಕಡಿದು ಕೊಲೆ ಮಾಡಿರುವ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಕಾಂಬೋಡಿಯ ಇರಾಕೋಡಿ ಎಂಬಲ್ಲಿ ಮಂಗಳವಾರ (ಇಂದು ) ನಡೆದಿದೆ.

ಇರಾಕೋಡಿ ಎಂಬಲ್ಲಿ ಮರಳು ಅನ್ಲೋಡ್ ಮಾಡುತ್ತಿದ್ದ ಸಂದರ್ಭದಲ್ಲಿ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಕಡಿದು ಪರಾರಿಯಾಗಿರುವುದಾಗಿ ವರದಿಯಾಗಿದೆ.
ಪಿಕಪ್ ಚಾಲಕ ಹನೀಫ್ ಎಂಬುವವರ ಸಹೋದರ ಕೊಳತ್ತಮಜಲು ನಿವಾಸಿ ರಹೀಂ (34) ಎಂಬಾತ ಹತ್ಯೆಯಾದ ವ್ಯಕ್ತಿ.
ಈತನ ಜೊತೆ ಇನ್ನೋರ್ವ ವ್ಯಕ್ತಿ ಶಾಫಿ ಎಂಬಾತನ ಕೈಗೆ ಪೆಟ್ಟು ಬಿದ್ದಿದೆ. ಈತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಈ ಕೊಲೆಗೆ ನಿಖರ ಕಾರಣ ಸದ್ಯಕ್ಕೆ ತಿಳಿದಿಲ್ಲವಾದರೂ ಮೇಲ್ನೋಟಕ್ಕೆ ಇದರ ಹಿಂದೆ ಅಕ್ರಮ ಮರಳುಗಾರಿಕೆ ದಂಧೆ ಮಾಫಿಯಾದ ಕೈವಾಡ ಇದೆಯೆಂಬ ಮಾಹಿತಿಗಳು ಕೇಳಿ ಬರುತ್ತಿವೆ ಎನ್ನಲಾಗಿದೆ.

ರಹೀಮ್
ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿರುವ ಕುರಿತು ವರದಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್ ಅವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
