5
Dakshina Kannada: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕು ವ್ಯಾಪ್ತಿಯಲ್ಲಿ ಮೂರು ದಿನ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಬಂಟ್ವಾಳ, ಬೆಳ್ತಂಗಡಿ, ಕಡಬ, ಪುತ್ತೂರು ಮತ್ತು ಸುಳ್ಯ ತಾಲೂಕುಗಳಲ್ಲಿ ಸೆಕ್ಷನ್ 63 ರ ಅಡಿಯಲ್ಲಿ ಮೇ 27 ರ ಸಂಜೆ 6 ಗಂಟೆಯಿಂದ ಮೇ 30ರ ಸಂಜೆ 6 ವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.
