Bantwal: ಎಡಿಜಿಪಿ ಆರ್.ಹಿತೇಂದ್ರ ಅವರು ʼ ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳನ್ನು ಕೂಡಲೇ ಬಂಧನ ಮಾಡುತ್ತೇವೆ. ಎಫ್‌ಐಆರ್‌ನಲ್ಲಿ ಎರಡು ಹೆಸರಿದೆ. ಬಂಧನ ಆದ ನಂತರ ಎಲ್ಲಾ ಮಾಹಿತಿಯನ್ನು ನೀಡುತ್ತೇವೆ. ತನಿಖೆ ಪ್ರಗತಿಯಲ್ಲಿದೆ. ನಂತರ ಮಾಹಿತಿ ನೀಡುತ್ತೇವೆ ಎಂದು ಹೇಳಿದರು.
ಮೇ 27 ರ ಮಂಗಳವಾರ ಮೂರು ಗಂಟೆಗೆ ಘಟನೆ ನಡೆದಿದ್ದು, ರೆಹಮಾನ್ ಮೃತಪಟ್ಟಿದ್ದು, ಮಂಗಳೂರು ನಗರ ಹಾಗೂ ದ.ಕ.ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಯಲ್ಲಿದೆ. ಅಂತ್ಯಸಂಸ್ಕಾರ ಶಾಂತಿಯುತವಾಗಿ ಮುಗಿದಿದೆ. ಎಲ್ಲರಿಊ ಧನ್ಯವಾದಗಳು. ಉಡುಪಿ ಚಿಕ್ಕಮಗಳೂರು, ಮೈಸೂರು ಹಾಗೂ ಕಾರವಾರದಿಂದ ಪೊಲೀಸರನ್ನು ಕರೆಸಿದ್ದು, ಗಾಳಿ ಸುದ್ದಿಗೆ ಕಿವಿ ಕೊಡದೆ ಸಾರ್ವಜನಿಕರು ಶಾಂತಿ ಕಾಪಾಡಬೇಕು ಎಂದು ಹೇಳಿದರು.
ಇದು ಪ್ರತಿಕಾರದ ಕೊಲೆನಾ? ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದಿ ಎಡಿಜಿಪಿ, ದ.ಕ. ಜಿಲ್ಲೆಗೆ ನಾವು ಹೊಸಬರು. ನೀವ್ಯಾರು ಹೊಸಬರು ಅಲ್ಲ, ಜಿಲ್ಲೆಯ ಇತಿಹಾಸ ನಿಮಗೆ ಗೊತ್ತಿದೆ. ಪ್ರಶ್ನೆಯ ಜೊತೆಗೆ ಉತ್ತರವೂ ನಿಮಗೆ ಗೊತ್ತಿದೆ ಎಂದು ಮಾರ್ಮಿಕವಾಗಿ ಹೇಳಿದರು.
