10
Mangalore: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಸೇಡಿನ ಹತ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜೊತೆಗೆ ಕೋಮು ಹಿಂಸಾಚಾರದ ವಿರುದ್ಧ ಜನರಿಂದ ತೀವ್ರವಾದ ಆಕ್ರೋಶ ಹೆಚ್ಚಾದ ಕಾರಣದಿಂದ, ಸರಕಾರ ಹಿರಿಯ ಪೊಲೀಸ್ ಅಧಿಕಾರಿಗಳ ವರ್ಗಾವಣೆಯನ್ನು ಇಂದು (ಗುರುವಾರ) ಮಾಡಿದೆ.
ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್‌ವಾಲ್ ಹಾಗೂ ದಕ್ಷಿಣ ಕನ್ನಡ ಎಸ್ ಪಿ ಯತೀಶ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ಮಂಗಳೂರು ಪೊಲೀಸ್ ಆಯುಕ್ತರಾಗಿ ಸುಧೀರ್ ಕುಮಾರ್ ರೆಡ್ಡಿ, ದಕ್ಷಿಣ ಕನ್ನಡ ಎಸ್ಪಿಯಾಗಿ ಅರುಣ್ ಕೆ ಅವರನ್ನು ನೇಮಿಸಲಾಗಿದೆ.

ಉಡುಪಿ ಪೊಲೀಸ್ ವರಿಷ್ಠಾಧಿಕಾರಿಯಗಿರುವ ಡಾ.ಅರುಣ್ ಕೆ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಎಸ್‌ಪಿ ಯಾಗಿ ವರ್ಗಾವಣೆ ಮಾಡಲಾಗಿದೆ. ಹರಿರಾಮ್ ಶಂಕರ್ ಉಡುಪಿ ಎಸ್‌ಪಿ ಆಗಿ ವರ್ಗಾವಣೆ ಮಾಡಲಾಗಿದೆ.
ಅನುಪಮ್ ಅಗರ್‌ವಾಲ್ ಅವರನ್ನು ಸಿಐಡಿ ಆರ್ಥಿಕ ಅಪರಾಧಗಳ ಡಿಐಜಿ ಆಗಿ ವರ್ಗಾವಣೆ ಮಾಡಲಾಗಿದೆ.

