7
IPL: ಗುರುವಾರ ನಡೆದ ಐಪಿಎಲ್ ( IPL) ಪಂದ್ಯಾವಳಿಯಲ್ಲಿ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ ಬೆಂಗಳೂರು ತಂಡ ಪಂಜಾಬ್ ಕಿಂಗ್ಸ್ ತಂಡಕ್ಕೆ ಸೋಲುಣಿಸಿ ಫೈನಲ್ ಗೆ ಲಗ್ಗೆ ಇಟ್ಟಿದೆ.
ಟಾಸ್ ಗೆದ್ದ ಆರ್ ಸಿಬಿ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಪಂಜಾಬ್ ಕಿಂಗ್ಸ್ 101 ರನ್ ಗಳ ಸಣ್ಣ ಮೊತ್ತಕ್ಕೆ ಆಲೌಟಾಯಿತು. ಗುರಿ ಬೆನ್ನಟ್ಟಿದ ಆರ್ ಸಿಬಿ 10 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 106 ರನ್ ಗಳಿಸಿ 8 ವಿಕೆಟ್ ಗಳ ಅಮೋಘ ಜಯಭೇರಿ ಬಾರಿಸಿತು.
ಅತ್ಯಮೋಘ ಆಟವಾಡಿದ ಫಿಲಿಪ್ ಸಾಲ್ಟ್ 56 ರನ್(27ಎಸೆತ) ಗಳಿಸಿ ಅಜೇಯರಾಗಿ ಉಳಿದರು.
