Home » Mangaluru : ರಣ ಮಳೆಗೆ ಮನೆಗಳ ಮೇಲೆ ಕುಸಿದ ಗುಡ್ಡ – ಬಾಲಕಿ ಸಾವು, ಅವಶೇಷಗಳಡಿ ಸಿಲುಕಿದ ಐವರು!!

Mangaluru : ರಣ ಮಳೆಗೆ ಮನೆಗಳ ಮೇಲೆ ಕುಸಿದ ಗುಡ್ಡ – ಬಾಲಕಿ ಸಾವು, ಅವಶೇಷಗಳಡಿ ಸಿಲುಕಿದ ಐವರು!!

0 comments

Mangaluru : ರಾಜ್ಯದಲ್ಲಿ ನಿರಂತರವಾಗಿ ಹರಿಯುತ್ತಿರುವ ಮಳೆಗೆ ಅನೇಕ ಕಡೆ ಆನೆ ಉಂಟಾಗಿದೆ. ಅಂತೆಯೇ ಕರಾವಳಿ ಭಾಗದಲ್ಲೂ ಭಾರಿ ಮಳೆಯಾಗುತ್ತಿದ್ದು, ಭಾರಿ ಮಳೆಯ (Monsoon Rain) ಪರಿಣಾಮ ಉಳ್ಳಾಲ ತಾಲೂಕಿನಲ್ಲಿ ಮನೆಗಳ ಮೇಲೆ ಗುಡ್ಡ ಕುಸಿದಿವೆ.

ಹೌದು, ಉಳ್ಳಾಲ ತಾಲೂಕಿನ ಎರಡು ಕಡೆ ಎರಡು ಮನೆಗಳ ಮೇಲೆ ಗುಡ್ಡ ಕುಸಿತ ಸಂಭವಿಸಿದೆ. ಮೋಂಟೆಪದವು ಬಳಿ ಐವರು ಗುಡ್ಡ ಕುಸಿತದಲ್ಲಿ ಸಿಲುಕಿದ್ದು, ಆ ಪೈಕಿ ಇಬ್ಬರನ್ನು ಈಗಾಗಲೇ ರಕ್ಷಣೆ ಮಾಡಲಾಗಿದೆ.

ಇನ್ನು ದೇರಳೆಕಟ್ಟೆಯಲ್ಲಿ ಕಂಪೌಂಡ್ ಗೋಡೆ ಮನೆ ಮೇಲೆ ಕುಸಿದು ಬಿದ್ದು ಫಾತಿಮಾ ನಯೀಮ (6) ಎನ್ನುವ ಮಗು ಮೃತಪಟ್ಟಿದೆ. ಮೊದಲಿಗೆ ಗಂಭೀರ ಸ್ಥಿತಿಯಲ್ಲಿದ್ದ ಫಾತಿಮಾ ನಯೀಮಳನ್ನು ರಕ್ಷಣೆ ಮಾಡಿ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಆಕೆ ಮೃತಪಟ್ಟಿದ್ದಾಳೆ. ಅಗ್ನಿ ಶಾಮಕ ದಳ ಸಿಬ್ಬಂದಿ ಮತ್ತು ಸ್ಥಳೀಯರು ಹಲವು ಗಂಟೆಗಳ ಕಾರ್ಯಾಚರಣೆ ಬಳಿಕ ಮಗುವನ್ನು ರಕ್ಷಣೆ ಮಾಡಿದ್ದರು. ಸದ್ಯ ಮೋಂಟೆಪದವು ಬಳಿ ಮೂವರ ರಕ್ಷಣೆಗಾಗಿ ಕಾರ್ಯಾಚರಣೆ ಪ್ರಗತಿಯಲ್ಲಿದೆ.

ಇಷ್ಟೇ ಅಲ್ಲದೆ ಕಲ್ಲಾಪುವಿನಲ್ಲಿ 50 ಕ್ಕೂ ಹೆಚ್ಚು ಮನೆಗಳಿಗೆ ನೆರೆಯಿಂದ ಸಮಸ್ಯೆಯಾಗಿದೆ. ತಲಪಾಡಿಯಲ್ಲಿ ಒಂದು ಮನೆಗೆ ನೀರು ನುಗ್ಗಿ ತೀವ್ರ ಹಾನಿಯಾಗಿದ್ದು, ರಾತ್ರಿಯೇ ಸಂತ್ರಸ್ತ ಕುಟುಂಬವನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ.

 

 

You may also like