Home » Mangaluru: ಮಂಗಳೂರು: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ: ಆರೋಪಿ ಅರೆಸ್ಟ್!

Mangaluru: ಮಂಗಳೂರು: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ: ಆರೋಪಿ ಅರೆಸ್ಟ್!

0 comments

Mangaluru: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿರುವ ಘಟನೆ ಮಂಗಳೂರಿನ ಮೂಲ್ಕಿಯಲ್ಲಿ (Mangaluru) ನಡೆದಿದೆ.

ಪಕ್ಷಿಕೆರೆ ಮೂಲದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿರುವ ಆರೋಪದ ಮೇಲೆ ಬಜಪೆಯ ಪ್ರೀತಮ್ ಎಂಬಾತನನ್ನು ಮೂಲ್ಕಿ ಪೊಲೀಸರು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮೇ 25, 2025ರಂದು ಆರೋಪಿ ಪ್ರೀತಮ್, ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಹಾಸನದ ಉದಯಪುರಕ್ಕೆ ಕರೆದುಕೊಂಡು ಹೋಗಿದ್ದನು. ಬಾಲಕಿಯ ತಾಯಿ, ತನ್ನ ಮಗಳ ಅಪಹರಣದ ಬಗ್ಗೆ ಮೂಲ್ಕಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಗುರುವಾರ (ಮೇ 29) ಆರೋಪಿಯು ಬಾಲಕಿಯೊಂದಿಗೆ ಮಂಗಳೂರಿಗೆ ವಾಪಸ್ ಬಂದಿರುವ ಮಾಹಿತಿಯನ್ನು ಪಡೆದ ಮೂಲ್ಕಿ ಪೊಲೀಸರು, ತಕ್ಷಣ ಕಾರ್ಯಾಚರಣೆ ನಡೆಸಿ ಪ್ರೀತಮ್‌ನನ್ನು ವಶಕ್ಕೆ ತೆಗೆದುಕೊಂಡರು.

ಪೊಲೀಸ್ ವಿಚಾರಣೆಯ ಸಂದರ್ಭದಲ್ಲಿ ಬಾಲಕಿಯು ಆರೋಪಿ ಪ್ರೀತಮ್ ತನ್ನನ್ನು ಅಪಹರಿಸಿ ಅತ್ಯಾಚಾರ ಎಸಗಿರುವುದಾಗಿ ತಿಳಿಸಿದ್ದಾಳೆ. ಈ ಆಧಾರದ ಮೇಲೆ ಮೂಲ್ಕಿ ಪೊಲೀಸ್‌ ಠಾಣೆಯ ಇನ್ಸೆಕ್ಟ‌ರ್ ಮಂಜುನಾಥ್ ಅವರು ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ನಡೆಸುತ್ತಿದ್ದಾರೆ.

You may also like