Mangalore: ಕೋಮುದ್ವೇಷವನ್ನು ಹರಡಿ ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ಪೋಸ್ಟ್‌ಗಳನ್ನು ಪ್ರಸಾರ ಮಾಡಿದ ಆರೋಪದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮೂರು ಪ್ರಕರಣಗಳನ್ನು ದಾಖಲು ಮಾಡಿರುವ ಕುರಿತು ಜಿಲ್ಲಾ ಪೊಲೀಸ್ ತಿಳಿಸಿದೆ.
ವೇಣೂರು ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲಾಗಿದೆ. ಇನ್ನೊಂದು ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಗಿದೆ. ಪೊಲೀಸ್ ಇಲಾಖೆ ಈ ಘಟನೆಗಳನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ತನಿಖೆ ತೀವ್ರಗೊಳಿಸಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆ ತರುವ, ಕೋಮುದ್ವೇಷ ಪ್ರಚೋದಿಸುವ, ಅಶಾಂತಿಯನ್ನು ಉಂಟು ಮಾಡುವ ಸಂದೇಶ ಕಂಡು ಬಂದಲ್ಲಿ, ಪ್ರಸಾರ ಮಾಡುವುದು ತಿಳಿದು ಬಂದಲ್ಲ ಅಂತಹ ವ್ಯಕ್ತಿ, ಗುಂಪುಗಳ ವಿರುದ್ಧ ಯಾವುದೇ ಮುಲಾಜಿಲ್ಲದೇ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ.
