3
Mangaluru: ನಗರದ ಸ್ಟೇಟ್ಬ್ಯಾಂಕ್ನ ರಾವ್ ಆಂಡ್ ರಾವ್ ವೃತ್ತದ ಬಳಿಯ ಅಪಾರ್ಟ್ಮೆಂಟ್ ಒಂದರಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಉಂಟಾದ ಘಟನೆ ನಡೆದಿದೆ.
ಸೋಮವಾರ ಮುಂಜಾನೆ ಸಮಯದಲ್ಲಿ ಈ ಘಟನೆ ನಡೆದಿದೆ. ಅಪಾರ್ಟ್ಮೆಂಟ್ನ ಎರಡನೇ ಮಹಡಿಯ ಮನೆಯಲ್ಲಿ ಬೆಂಕಿ ಕಾಣಿಸಿದೆ. ಮಾಹಿತಿ ತಿಳಿದ ಕೂಡಲೇ ಪಾಂಡೇಶ್ವರ ಅಗ್ನಿಶಾಮಕ ಠಾಣೆ ಅಧಿಕಾರಿ ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಸೋಫಾ, ಎಲೆಕ್ಟ್ರಾನಿಕ್ ಉಪಕರಣಗಳು ಬೆಂಕಿಗೆ ಆಹುತಿಯಾಗಿದೆ.
ವಿದ್ಯಾರ್ಥಿಗಳು ಮನೆಯಲ್ಲಿ ಬಾಡಿಗೆಯಲ್ಲಿದ್ದು, ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ. ಹೀಟರ್ ಬಳಕೆ ಸಂದರ್ಭ ಶಾರ್ಟ್ ಸರ್ಕ್ಯೂಟ್ ಉಂಟಾಗಿರುವ ಸಾಧ್ಯತೆಯಿದೆ ಎನ್ನಲಾಗಿದೆ.
ಎರಡನೇ ಮಹಡಿಯಲ್ಲಿ ದಟ್ಟ ಹೊಗೆ ಆವರಿಸಿದ್ದು, ಕಾರಣ ಅಗ್ನಿಶಾಮಕದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ. 75 ಸಾವಿರ ರೂ.ನಷ್ಟು ಉಂಟಾಗಿದೆ ಎಂದು ವರದಿಯಾಗಿದೆ.
