Shocking Video: ಕಾಮುಕನೊಬ್ಬ ವಿದ್ಯಾರ್ಥಿನಿಯೊಬ್ಬಳ ಸಮವಸ್ತ್ರ ಎತ್ತಿ ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಿಸಿದ ಆಘಾತಕಾರಿ ವಿಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದು ಬೆಳಕಿಗೆ ಬಂದ ಕೂಡಲೇ ಸಾರ್ವಜನಿಕರಿಂದ ಬಾರಿ ಆಕ್ರೋಶ ವ್ಯಕ್ತವಾಗಿದ್ದು, ಕಾಮುಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಹೌದು, ಮೇಘಾಲಯದ ಶಿಲ್ಲಾಂಗ್‌ನಲ್ಲಿ ಇಂತಹ ಒಂದು ಪ್ರಕರಣ ಬೆಳಕಿಗೆ ಬಂದಿದೆ. ಮೇ 23ರಂದು ವೈಡಬ್ಲ್ಯೂಸಿಎ, ಉಮ್ಸೋಹ್ಸನ್ ಬಳಿ ನಡೆದಿದ್ದ ಈ ಘಟನೆ ಮೊಬೈಲ್‌ನಲ್ಲಿ ಸೆರೆಯಾಗಿದೆ. ವಿಡಿಯೋದಲ್ಲಿ ಮುಖವಾಡ ಧರಿಸಿದ ವ್ಯಕ್ತಿಯೊಬ್ಬ ಶಾಲಾ ವಿದ್ಯಾರ್ಥಿನಿಯ ಸಮವಸ್ತ್ರವನ್ನು ಅಸಭ್ಯವಾಗಿ ಎತ್ತಿ ಮೊಬೈಲ್‌ನಲ್ಲಿ ಫೋಟೋ ತೆಗೆಯುತ್ತಿರುವುದು ಸ್ಪಷ್ಟವಾಗಿ ಕಾಣಿಸಿದೆ. ಇದೀಗ ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಅಸ್ಸಾಂ ಮೂಲದ 24 ವರ್ಷದ ಯುವಕ ಹಿಮಾನ್ ಗೋಗೊಯ್‌ನನ್ನು ಮೇಘಾಲಯ ಪೊಲೀಸರು ಬಂಧಿಸಿದ್ದಾರೆ.
ಈ ಸಂಬಂಧ ಲುಮ್ದಿಯೆಂಗ್‌ಜ್ರಿ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಮತ್ತು ಪೋಕ್ಸೋ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಲಾಗಿದೆ.
