7
Death: ಕಾಸರಗೋಡು ಮೂಲದ ಟ್ಯಾಕ್ಸಿ ಚಾಲಕರೊಬ್ಬರನ್ನು ರವಿವಾರ ಬೆಳಗಿನ ಜಾವ ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಸೌದಿ ಅರೇಬಿಯದ ಅಸೀರ್ ಪ್ರಾಂತ್ಯದ ಬಿಶಾ ಎಂಬಲ್ಲಿ ನಡೆದಿದೆ.
ಮೃತಪಟ್ಟವರನ್ನು 41 ವರ್ಷದ ಬಷೀರ್ ಎಂದು ಗುರುತಿಸಲಾಗಿದೆ. ಟ್ಯಾಕ್ಸಿ ಚಾಲಕರಾಗಿ ಕಳೆದ 13 ವರ್ಷಗಳಿಂದ ಬಷೀರ್ ಅವರು ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದರು. ಅವರು ಮೊದಲು ಹೌಸ್ ಡ್ರೈವರ್ ವೀಸಾದ ಮೇಲೆ ಸೌದಿಗೆ ಆಗಮಿಸಿದ್ದರು ಎನ್ನಲಾಗಿದೆ.
ಬಿಶಾ ಪ್ರದೇಶದಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಬಷೀರ್, ತನ್ನ ನಿವಾಸದ ಬಳಿ ತನ್ನ ಟ್ಯಾಕ್ಸಿಯನ್ನು ಸ್ವಚ್ಛಗೊಳಿಸುತ್ತಿದ್ದಾಗ ದಾಳಿ ನಡೆಸಲಾಗಿದೆ ಎಂದು ವರದಿಯಾಗಿದೆ. ಬಿಶಾದಿಂದ ಸುಮಾರು 35 ಕಿಲೋಮೀಟರ್ ದೂರದಲ್ಲಿರುವ ರಸ್ತೆಯಲ್ಲಿ ರವಿವಾರ ಮಧ್ಯರಾತ್ರಿಯ ಸುಮಾರಿಗೆ ಗುಂಡಿನ ದಾಳಿ ನಡೆದಿದೆ ಎನ್ನಲಾಗಿದೆ. ದಾಳಿಕೋರರು ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ.
