Home » Karkala: ಉಪನ್ಯಾಸಕರ ಹುದ್ದೆ : ಅರ್ಜಿ ಆಹ್ವಾನ!

Karkala: ಉಪನ್ಯಾಸಕರ ಹುದ್ದೆ : ಅರ್ಜಿ ಆಹ್ವಾನ!

0 comments

Karkala: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಕಾರ್ಕಳ ತಾಲೂಕು ಮಿಯ್ಯಾರು ಕಾಲೇಜಿನಲ್ಲಿ ಖಾಲಿ ಇರುವ ಕನ್ನಡ, ಆಂಗ್ಲಭಾಷೆ, ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಜೀವಶಾಸ್ತ್ರ ಹಾಗೂ ಬ್ರಹ್ಮಾವರ ತಾಲೂಕು ಆರೂರು ಮೊರಾರ್ಜಿ ದೇಸಾಯಿ ವಸತಿ ಕಾಲೇಜಿನಲ್ಲಿ ಖಾಲಿ ಇರುವ ಕನ್ನಡ, ಗಣಿತ, ಜೀವಶಾಸ್ತ್ರ ಮತ್ತು ಗಣಕ ವಿಜ್ಞಾನ ವಿಷಯಗಳ ಉಪನ್ಯಾಸಕರ ಹುದ್ದೆಗಳಿಗೆ ಅರ್ಹ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜೂನ್ 6 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಮಿಯ್ಯಾರು ಕಾಲೇಜು ಪ್ರಾಂಶುಪಾಲರು ಮೊ.ನಂ: 7337795963 ಹಾಗೂ ಆರೂರು ಕಾಲೇಜು ಪ್ರಾಂಶುಪಾಲರು ಮೊ.ನಂ:7012988065 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

You may also like