5
Police Protest: ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ಸಸ್ಪೆಂಡ್ ಹಿನ್ನೆಲೆ ಅಮಾನತ್ತು ಖಂಡಿಸಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಒಬ್ಬರು ಪ್ರತಿಭಟನೆ ನಡೆಸಿದ್ದಾರೆ. ಯೂನಿಫಾರ್ಮ್ನಲ್ಲೇ ಪೊಲೀಸ್ ಹೆಚ್.ಸಿ. ಮಡಿವಾಳ ಪೊಲೀಸ್ ಸ್ಟೇಷನ್ ಹೆಡ್ ಕಾನ್ಸ್ಟೇಬಲ್ ನರಸಿಂಹರಾಜು ಪ್ರತಿಭಟನೆ ನಡೆಸಿದ್ದಾರೆ.
ಕೈಗೆ ಕಪ್ಪು ಪಟ್ಟಿ ಧರಿಸಿ, ಕೈಯಲ್ಲಿ ಅಂಬೇಡ್ಕರ್ ಫೋಟೋ ಹಿಡಿದು ರಾಜಭವನದ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ವಿಧಾನಸೌಧದ ಮುಂಭಾಗದಿಂದ ರಾಜಭವನದ ವರೆಗೂ ಮೆರವಣಿಗೆ ಮೂಲಕ ಪ್ರತಿಭಟನೆ ನಡೆಸಿದ ವೇಳೆ ರಾಜಭವನದ ಬಳಿ ವಿಧಾನಸೌಧದ ಪೊಲೀಸರು ವಶಕ್ಕೆ ಪಡೆದಿದ್ದಾರೆ.
