2
Udupi: ಉಡುಪಿಯಲ್ಲಿ (Udupi) ಕ್ರಿಕೆಟ್ ಬೆಟ್ಟಿಂಗ್ ವೆಬ್ಸೈಟ್ ಮೂಲಕ ಐಪಿಎಲ್ ಫೈನಲ್ ಕ್ರಿಕೆಟ್ ಪಂದ್ಯಕ್ಕೆ ಸಂಬಂಧಿಸಿ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದ ದಂಪತಿಯನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಅನಂತ ಪಿ ಹಾಗೂ ಆತನ ಪತ್ನಿ ವಾಣಿ ಬಂಧಿತ ಆರೋಪಿಗಳು. ಇವರಿಂದ ಎರಡು ಮೊಬೈಲ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇವರು ಪಿಪಿಸಿ ಕಾಲೇಜು ಬಳಿಯ ಬಾಡಿಗೆ ಮನೆಯಲ್ಲಿ ಈ ದಂಧೆ ನಡೆಸುತ್ತಿದ್ದರು.
ಬೇರೆ ಬೇರೆ ವ್ಯಕ್ತಿಗಳಿಗೆ ಕರೆ ಮಾಡಿ ಹಣ ಸಂಗ್ರಹಿಸುತ್ತಿದ್ದು ಆನ್ಲೈನ್ ಮೂಲಕ ಹಣ ಪಡೆಯುತ್ತಿದ್ದರು. ಈ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
