Mangaluru: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನಡೆಸುವ ವೈದ್ಯಕೀಯ ಪ್ರವೇಶ ಪರೀಕ್ಷೆ NEET UG ಫಲಿತಾಂಶ ಪ್ರಕಟಗೊಂಡಿದೆ. ಮಂಗಳೂರಿನ ಪ್ರತಿಷ್ಠಿತ ಎಕ್ಸ್ ಪರ್ಟ್ ಕಾಲೇಜಿನ ವಿದ್ಯಾರ್ಥಿ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಗಳಿಸುವ ಮೂಲಕ ಸಾಧನೆಯನ್ನು ಮಾಡಿದ್ದಾನೆ. ನಿಖಿಲ್ ಸೋನದ್ ಈ ಸಾಧನೆ ಮಾಡಿದ ವಿದ್ಯಾರ್ಥಿ.
ಎಕ್ಸ್ ಪರ್ಟ್ ಕಾಲೇಜಿನ ವಿದ್ಯಾರ್ಥಿ ನಿಖಿಲ್, 720ಕ್ಕೆ 670 ಪಡೆದು ಆಲ್ ಇಂಡಿಯಾ ರ್ಯಾಂಕಿಂಗ್‌ನಲ್ಲಿ 17 ನೇ ಸ್ಥಾನ ಪಡೆದಿದ್ದಾರೆ. ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಅದೇ ರೀತಿ ನಿಧಿ ಕೆಜಿ ಆಲ್ ಇಂಡಿಯಾ ರ್ಯಾಂಕಿಂಗ್‌ನಲ್ಲಿ 84 ನೇ ಸ್ಥಾನ, ರಾಜ್ಯದಲ್ಲಿ 7 ನೇ ಸ್ಥಾನವನ್ನು ಪಡೆದಿದ್ದಾರೆ.
ಈ ಸಾಧನೆಯ ಮೂಲಕ ಎಕ್ಸ್ ಪರ್ಟ್ ಶಿಕ್ಷಣ ಸಂಸ್ಥೆ ಈ ಬಾರಿಯೂ ಮಹತ್ತರ ಸಾಧನೆ ಮಾಡಿದ್ದು, ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಚೇರ್ಮನ್ ನರೇಂದ್ರ ಎಲ್ ನಾಯಕ್, ಇದು ನಮ್ಮ ವಿದ್ಯಾರ್ಥಿಗಳ ಸತತ ಪರಿಶ್ರಮ ಮತ್ತು ಶಿಕ್ಷಕರ ಮಾರ್ಗದರ್ಶನದಿಂದ ಸಾಧ್ಯವಾಯಿತು ಎಂದು ಹರ್ಷ ವ್ಯಕ್ತಪಡಿಸಿ ಸಾಧಕ ವಿದ್ಯಾರ್ಥಿಗಳನ್ನು ಶ್ಲಾಘಿಸಿದ್ದಾರೆ.
